''ನೂರಾರು ಕೋಟಿ ರೂ. ಭ್ರಷ್ಟಾಚಾರ ನಡೆದರೂ ಸಿಎಂ ಅಧಿಕಾರದಲ್ಲಿರುವುದೇಕೆ?''
ಬೆಂಗಳೂರು, ಮೇ 28: ಭ್ರಷ್ಟಾಚಾರದ ಪಿತಾಮಹ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೀವನವೆಲ್ಲಾ ಹೋರಾಟ ಮಾಡಿ, ನಂತರ ಅಧಿಕಾರಕ್ಕಾಗಿ ಅದೇ ಹುತ್ತದಲ್ಲಿ ಸೇರಿಕೊಂಡಿರುವ ಮಹಾನುಭಾವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಅವರು ಕಿಡಿ ಕಾರಿದ್ದಾರೆ.
ಮುಡಾ ಪ್ರಕರಣ ಹಾಗೂ ಕೋಟ್ಯಂತರ ರೂಪಾಯಿ ಅವ್ಯವಹಾರ, ಭ್ರಷ್ಟಾಚಾರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭೂಮಿಯ ಮೇಲಿನ ಅತ್ಯಂತ ಭ್ರಷ್ಟರು ಈ ಬಿಜೆಪಿಯವರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ವರೆಗೆ ಭ್ರಷ್ಟಾಚಾರ ಬೆಳೆದಿರಲಿಲ್ಲ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ, ನಿರ್ಧಾರಗಳ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅಕ್ರಮವಾಗಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 14 ಸೈಟು ಕಬಳಿಸಿ ಸಿಕ್ಕಿಬಿದ್ದಾಗ ವಾಪಸ್ಸು ಕೊಟ್ಟ ಮಹಾನುಭಾವರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ಆಗಿದೆ ಎಂದು ವಿಧಾನಸಭೆಯ ಅಧಿವೇಶನದಲ್ಲಿ ಸ್ವತಃ ಒಪ್ಪಿಕೊಂಡ ಮೇಲೂ ಅಧಿಕಾರದಲ್ಲಿ ಮುಂದುವರೆಯುತ್ತಿರುವ ಮಹಾನುಭಾವರು.
ಭ್ರಷ್ಟಾಚಾರದ ಪಿತಾಮಹ ಎನಿಸಿಕೊಂಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಿದವರೇ ಮರಳಿ ಅದೇ ಹುತ್ತದಲ್ಲಿ ಅಧಿಕಾರಕ್ಕಾಗಿ ಸೇರಿಕೊಂಡವರು. ಇದೀಗ ಅವರೇ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ಲೇವಡಿ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧ ಮಾಡಿದರು.
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ನಾವಲ್ಲ, ಸ್ವತಃ ತಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು, ತಮ್ಮ ಆರ್ಥಿಕ ಸಲಹೆಗಾರರೂ ಆದ ಬಸವರಾಜ ರಾಯರೆಡ್ಡಿ ಅವರು ತಮಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಅವರು ಟೀಕಿಸಿದರು.
ಇದಷ್ಟು ಮಾತ್ರವಲ್ಲದೇ 2013 ರಲ್ಲಿ ತಾವು ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿ ಆದಾಗ ಆಗಾಗಲೇ 6 ಬಾರಿ ಶಾಸಕರಾಗಿದ್ದ ಮಾನ್ಯ ಡಿಕೆ ಶಿವಕುಮಾರ್ ಅವರನ್ನ ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ?. ಡಿ.ಕೆ.ಶಿವಕುಮಾರ್ ಅವರು ಭ್ರಷ್ಟರು ಎಂಬ ಕಾರಣಕ್ಕೋ?, ಯಾವುದಕ್ಕಾಗಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದಿರಿ ಎಂಬು ಸ್ಪಷ್ಟನೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.












Click it and Unblock the Notifications