"RSS ಬ್ಯಾನ್ ಗೀಳು ಬಿಡಿ, ಪ್ರವಾಹ ಪರಿಹಾರದತ್ತ ಗಮನ ಕೊಡಿ''

ಬೆಂಗಳೂರು, ಅಕ್ಟೋಬರ್ 13: ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಸರ್ಕಾರಿ ಶಾಲೆ, ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘ, ಶಾಖೆ ಹೆಸರುಗಳಲ್ಲಿ ನಡೆಸುವ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಬಿಜೆಪಿ ನಾಯಕರು ಸಚಿವರ ಮೇಲೆ ಮುಗಿಬಿದ್ದಿದ್ದಾರೆ. ಇದೇ ವಿಚಾರವಾಗಿ ಅನೇಕ ವಿಪಕ್ಷ ನಾಯಕರು ಮಾತನಾಡಿದ್ದು, ಆರ್.ಅಶೋಕ್ ಅವರು ಪ್ರತಿಕ್ರಿಯಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನಿಷೇಧ ಮಾಡುವ ಗೀಳು! ನಿಮಗಿದೆ ಎಂದು ಎಕ್ಸ್ ಪೋಸ್ಟ್ ಮೂಲಕ ಆರ್.ಅಶೋಕ್ ಗುಡುಗಿದ್ದಾರೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ. ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ, ಬಂದ್ ಮಾಡುತ್ತಿದ್ದಾರೆ.

R Ashok slams Priyank Kharge Focus on Kalaburagi Flood Relief Not RSS Ban

ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್ ಎಸ್ಎಸ್ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಆರ್ ಎಸ್ಎಸ್ ನಿಷೇಧ ಮಾಡುವ ನಿಮ್ಮ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಸಲಹೆ ನೀಡಿದ್ದಾರೆ.

ಜನ ನಿಮಗೆ ಅಧಿಕಾರ ಕೊಟ್ಟಿರುವುದು ಬರೀ ರಾಜಕಾರಣ ಮಾಡುವುದಕ್ಕೆ ಅಲ್ಲ. ಆರ್ ಎಸ್ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಸುವಂತೆ ಅವರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಬೇಡಿ

ಮತ್ತೊಂದು ಪೋಸ್ಟ್‌ನಲ್ಲಿ ಆರ್.ಅಶೋಕ್ ಅವರು, ಜಾತಿ ಗಣತಿ ಬಗ್ಗೆ ಬೇಸರ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಇಲ್ಲದ ತರಾತುರಿಯ "ಕುರ್ಚಿ ಬಚಾವೋ" ಜಾತಿಗಣತಿ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜನೆ ಮಾಡಿದೆ. ಒಂದು ತಿಂಗಳು ಸರ್ಕಾರಿ ಶಾಲೆಗಳಿಗೆ ಬೀಗ ಜಡಿದು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಲಾಗಿದೆ. ಸದ್ಯ ಅಂಗನವಾಡಿ ಕಾರ್ಯಕತೆಯರನ್ನೂ ಸಮೀಕ್ಷೆ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಇದರಿಂದ ಹಳ್ಳಿಗಾಡಿನ ಬಡ ಮಕ್ಕಳ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿದ್ದ ಈ ನಾಲಾಯಕ್ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿಗಳ ವಿರುದ್ಧ ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಜಾತಿಗಣತಿ ನಾಟಕದಿಂದ ಸಾರ್ವಜನಿಕರಿಗೆ ಎಷ್ಟು ತಿಂದರೆ ಆಗುತ್ತಿದೆ ಎನ್ನುವ ಬಗ್ಗೆ ನಿಮಗೆ ಅರಿವೇ ಇಲ್ಲ. ನಿಮಗೆ ಕುರ್ಚಿ ಉಳಿಸಿಕೊಳ್ಳುವ ಹಠ, ಕನ್ನಡಿಗರಿಗೆ ಪರದಾಟ. ನಿಮ್ಮ ನಾಲಾಯಕ್ ಸರ್ಕಾರ ಯಾವಾಗ ತೊಲಗುತ್ತೋ ಎಂದು ಕನ್ನಡಿಗರು ಎದುರು ನೋಡುತ್ತಿದ್ದಾರೆ ಎಂದು ದೂರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+