39,437 ಕೋಟಿ ರೂ ಕಸ ಟೆಂಡರ್‌ನಲ್ಲಿ ಭ್ರಷ್ಟಾಚಾರ? ಲೋಕಾಯುಕ್ತ ಮೊರೆ ಹೋದ ಆರ್ ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧಿಕಾರ ಸ್ವೀಕರಿಸದ ಒಂದು ವಾರದಲ್ಲೇ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಕಾರ್ಮಿಕರ ಟೂಲ್‌ ಕಿಟ್‌ನಲ್ಲಿ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಸರ್ಕಾರವನ್ನು ವಿಪಕ್ಷ ನಾಯಕರು ಪ್ರಶ್ನಿಸಿದ್ದರು. ಇದೀಗ ನಿಯಮ ಮೀರಿ ಕಸ ಸಂಸ್ಕರಣೆಗೆ ಟೆಂಡರ್ ನೀಡಿ ಕಮಿಷನ್ ವಸೂಲಿಗೆ ಮುಂದಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಆರ್.ಅಶೋಕ್ ಅವರು ಲೋಕಾಯುಕ್ತಕ್ಕೆ ಬುಧವಾರ ದೂರು ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಬಳಿಕ ಲೋಕಾಯುಕ್ತಿರಗೆ ದೂರು ನೀಡಿದರು. 'ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್‌ ಲಿಮಿಟೆಡ್‌ಗೆ ನೀಡುತ್ತಿರುವ ಟೆಂಡರ್‌ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್‌ ಪಡೆಯಲಾಗಿದೆ ಎಂದು ಆರೋಪಿಸಿದರು.

Rs 39 437 Crore Irregularities

39,000 ಕೋಟಿ ರೂ. ಹಗರಣ?

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ವಚ್ಛತೆಯಲ್ಲಿ ಅತ್ಯುತ್ತಮ ನಗರ ಎಂಬ ಹೆಗ್ಗಳಿಕೆ ಬೆಂಗಳೂರಿಗೆ ಸಿಕ್ಕಿತ್ತು. ಈಗ ಬೆಂಗಳೂರು ಬೆಚ್ಚಿಬೀಳುವಂತಹ 39,000 ಕೋಟಿ ರೂ. ಹಗರಣವನ್ನು ಕಾಂಗ್ರೆಸ್‌ ಸರ್ಕಾರ ಕಸದ ಹೆಸರಲ್ಲಿ ಮಾಡಿದೆ. ದೇಶದ ಇತಿಹಾಸದಲ್ಲಿ ಕಸದಲ್ಲಿ ಲೂಟಿ ಮಾಡಿರುವ ಹಗರಣ ಇದೇ ಮೊದಲು. ಇದು ಹೈಕಮಾಂಡ್‌ನ ಕಪ್ಪ ಕಾಣಿಕೆ ಟೆಂಡರ್‌ ಆಗಿದೆ. ಪ್ರತಿ ವರ್ಷ ಬೆಂಗಳೂರಿನಲ್ಲಿ ಕಸ ಸಂಗ್ರಹ ಮತ್ತು ಸಾಗಣೆಗೆ 514 ಕೋಟಿ ರೂ. ಮತ್ತು ಸಂಸ್ಕರಣೆ ಮತ್ತು ವಿಲೇವಾರಿಗೆ 380 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. 11,000 ಪೌರಕಾರ್ಮಿಕರಿಗೆ ವರ್ಷಕ್ಕೆ 444 ಕೋಟಿ ರೂ. ಸಂಬಳ ನೀಡಲಾಗುತ್ತಿದೆ. ಎಲ್ಲ ಸೇರಿ ಸೇರಿ ವರ್ಷಕ್ಕೆ ಒಟ್ಟು 1,344 ಕೋಟಿ ರೂ. ಖರ್ಚಾಗುತ್ತದೆ ಎಂದು ವಿವರಿಸಿದರು.

ಬೆಂಗಳೂರು-ಮೈಸೂರು ಸೇರಿ 5 ಮಾರ್ಗಗಳಿಗೆ RRTS ಪ್ರಸ್ತಾವನೆ: ಮೆಟ್ರೋ ಯೋಜನೆಗಳಿಗೆ ಕೇಂದ್ರದ ಒಪ್ಪಿಗೆಗೆ ವೇಟಿಂಗ್
ಬೆಂಗಳೂರು-ಮೈಸೂರು ಸೇರಿ 5 ಮಾರ್ಗಗಳಿಗೆ RRTS ಪ್ರಸ್ತಾವನೆ: ಮೆಟ್ರೋ ಯೋಜನೆಗಳಿಗೆ ಕೇಂದ್ರದ ಒಪ್ಪಿಗೆಗೆ ವೇಟಿಂಗ್

10,000 ಕೋಟಿ ರೂ. ಕಿಕ್‌ಬ್ಯಾಕ್‌

ಜಿಬಿಎನಲ್ಲಿ ಈವರೆಗೆ ರಾಜ್ಯದ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದರು. ಹೊಸ 39,000 ಕೋಟಿ ರೂ. ಮೊತ್ತದ ಟೆಂಡರ್‌ನ್ನು ದೆಹಲಿಯ ಕಂಪನಿಗೆ ನೀಡಿದೆ.ಇದರಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್‌ ಇದೆ. ಸಾಮಾನ್ಯವಾಗಿ ಪ್ರತಿ ವರ್ಷ ಟೆಂಡರ್‌ ಮಾಡುತ್ತಿದ್ದರೆ, ಈ ಬಾರಿ 30 ವರ್ಷ ಹಾಗೂ ಇನ್ನೂ ವಿಸ್ತರಣೆಯ ಅವಕಾಶದ 5 ಸೇರಿ ಒಟ್ಟು 35 ವರ್ಷಕ್ಕೆ ದೆಹಲಿಯ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್‌ ಲಿಮಿಟೆಡ್‌ ಅಥವಾ ರಾಮ್‌ಕಿ ಕಂಪನಿಗೆ ಟೆಂಡರ್‌ ನೀಡಲಾಗಿದೆ.

ಬೆಂಗಳೂರು ಉತ್ತರ ಹಾಗೂ ದಕ್ಷಿಣಕ್ಕೆ ಎರಡು ಪ್ಯಾಕೇಜ್‌ ಮಾಡಲಾಗಿದೆ. ಇದಕ್ಕೂ ಮುನ್ನ ಸರ್ಕಾರಿ ಸ್ವಾಮ್ಯದ ರೈಟ್ಸ್‌ ಕಂಪನಿಯಿಂದ ಸಲಹೆ ಪಡೆದು, ಆ ಸಲಹೆಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ. ಇದರ ಬದಲು ಮಾನ್ಯತೆ ಇಲ್ಲದ ಕಂಪನಿಗೆ ಸಲಹೆಗಾಗಿ ಅವಕಾಶ ನೀಡಲಾಗಿದೆ. ಈಗ ಕಸದ ಟೆಂಡರ್‌ನ್ನು ಎಂಎಸ್‌ಡಬ್ಲ್ಯು ಕಂಪನಿಗೆ ನೀಡಿ, 1,500 ಕೋಟಿ ಸಾಲ ಪಡೆಯಲು ಕೂಡ ಅವಕಾಶ ಕೊಡಲಾಗಿದೆ ಎಂದರು.

ಶೇಕಡಾ 950ರಷ್ಟು ಅಧಿಕ ಶುಲ್ಕ

ಸದ್ಯ ಪ್ರತಿ ಟನ್‌ಗೆ ಟಿಪ್ಪಿಂಗ್‌ ಶುಲ್ಕವಾಗಿ 260 ರೂ. ನೀಡಲಾಗುತ್ತಿದೆ. ಹೊಸ ಟೆಂಡರ್‌ನಂತೆ 2,400 ರೂ. ನೀಡುತ್ತಿದ್ದು, ಶೇ. 950ರಷ್ಟು ಅಧಿಕವಾಗಿದೆ. ಹಳೆ ವೆಚ್ಚದಲ್ಲೇ ಮುಂದುವರಿಸಿದರೆ 30 ವರ್ಷಕ್ಕೆ 6,117 ಕೋಟಿ ರೂ. ಆಗುತ್ತದೆ. ಹೊಸ ಟೆಂಡರ್‌ನಿಂದ ಈ ಖರ್ಚು 39,437 ಕೋಟಿ ರೂ. ಆಗುತ್ತಿದ್ದು, ಹೆಚ್ಚುವರಿಯಾಗಿ 33,320 ಕೋಟಿ ರೂ. ವೆಚ್ಚವಾಗುತ್ತದೆ. ಟೆಂಡರ್‌ ಪ್ರಕಾರ, ದಕ್ಷಿಣದ ಪ್ಯಾಕೇಜ್‌ನಲ್ಲಿ ಶೇ. 19.43 ಹಾಗೂ ಉತ್ತರದ ಪ್ಯಾಕೇಜ್‌ನಲ್ಲಿ ಶೇ.19.25 ಅಧಿಕ ಮೊತ್ತ ನಮೂದಾಗಿದೆ. ಎರಡೂ ಪ್ಯಾಕೇಜ್‌ ಸೇರಿ ಒಟ್ಟಾಗಿ ಶೇ. 19.33 ಹೆಚ್ಚಿದೆ ಎಂದರು.

ಮೊದಲೆರಡು ಬಾರಿ ಟೆಂಡರ್‌ ಕರೆದು ವಿಫಲವಾಗಿ ಮೂರನೇ ಬಾರಿಗೆ ದೆಹಲಿಯ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್‌ ಲಿಮಿಟೆಡ್‌ ಅಥವಾ ರಾಮ್‌ಕಿ ಕಂಪನಿಗೆ (ಮಾತೃ ಸಂಸ್ಥೆ) ನೀಡಲಾಗಿದೆ. ಟೆಂಡರ್‌ ಪರಿಶೀಲನೆ ಅಧಿಕಾರಿಗಳ ತಂಡಕ್ಕೆ ನೀಡಿದ್ದರೂ ಅದನ್ನು ಸರಿಯಾಗಿ ಪರಿಶೀಲಿಸಿಲ್ಲ. ಈ ಟೆಂಡರ್‌ ಪ್ರಕಾರ, ಒಂದು ಟನ್‌ ಸಂಸ್ಕರಣೆಯ ಖರ್ಚು ಶೇ. 430 ಹೆಚ್ಚಲಿದೆ. ಈಗ ಟನ್‌ಗೆ 2,151 ರೂ. ಆಗಿದ್ದರೆ, 30 ವರ್ಷದ ನಂತರ 9,297 ರೂ. ಆಗುತ್ತದೆ. ಕಾನೂನು ಪ್ರಕಾರ ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕಿದ್ದರೂ, ಅದನ್ನು ಮಾಡದೆ ಅಕ್ರಮ ಎಸಗಲಾಗಿದೆ

ಕಾಂಗ್ರೆಸ್‌ ಸರ್ಕಾರ ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್‌ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ಕೊಟ್ಟಿದ್ದೇವೆ. ಲೋಕಾಯುಕ್ತರು ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಅಕ್ರಮದಿಂದಾಗಿ ಬೆಂಗಳೂರಿನ ಜನರ ತೆರಿಗೆ ಹಣ ಲೂಟಿಯಾಗಿದೆ. ಇದನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಿ ಹೋರಾಟ ಮಾಡಲಾಗುವುದು. ಕರ್ನಾಟಕವನ್ನು ಕಾಂಗ್ರೆಸ್‌ ಹೈಕಮಾಂಡ್‌ ಎಟಿಎಂ ಮಾಡಿಕೊಂಡಿದೆ. ಮುಖ್ಯಮಮಂತ್ರಿಗಳೇ ಇದಕ್ಕೆ ಆತುರದಿಂದ ಸಹಿ ಹಾಕಿದ್ದಾರೆ. ಒಂದು ಕಂಪನಿಯ ಪರವಾಗಿ ಸರ್ಕಾರ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದ ಒಂದು ವಾರದಲ್ಲೇ ಅತಿ ದೊಡ್ಡ ಹಗರಣ ಬಯಲಿಗೆ ಬಂದಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+