ಅಪರಾಧ ತಡೆಯುವಲ್ಲಿ ವಿಫಲವಾದ ಪೊಲೀಸ್ ಇಲಾಖೆ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ: ಆರ್.ಅಶೋಕ್
ಬೆಂಗಳೂರು: ರಾಜ್ಯದ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಯೊಬ್ಬರು ಕಚೇರಿಯೊಳಗೇ ಅಸಭ್ಯ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂಬ ಆರೋಪಗಳು ಹೊರ ಬಿದ್ದಿವೆ. ಅದರ ವಿಡಿಯೋಗಳು ವೈರಲ್ ಆಗಿರುವುದು ಕಾಂಗ್ರೆಸ್ ಸರ್ಕಾರದಲ್ಲಿ ಪೊಲೀಸ್ ಇಲಾಖೆ ನೈತಿಕವಾಗಿ ಎಷ್ಟು ಅಧಃಪತನವಾಗಿದೆ ಎನ್ನುವುದಕ್ಕೆ ಜೀವಂತ ಸಾಕ್ಷಿ. ಇದು ಕೇವಲ ಒಬ್ಬ ಅಧಿಕಾರಿಯ ವೈಯಕ್ತಿಕ ತಪ್ಪಲ್ಲ ಇಡೀ ಪೊಲೀಸ್ ವ್ಯವಸ್ಥೆಯ ನೈತಿಕ ಪತನದ ನಿದರ್ಶನ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ರಾಸಲೀಲೆ-ವಸೂಲಿ ಕೇಂದ್ರಗಳಾಗಿವೆ ಎಂದು ಅವರು ಟ್ವಿಟ್ ಪೋಸ್ಟ್ ಮೂಲಕ ಮಂಗಳವಾರ ಆರೋಪಿಸಿದರದು. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು ರಾಜ್ಯ ಕಂಡಿಲ್ಲ. ಜನರ ಜೀವ, ಆಸ್ತಿ ಮತ್ತು ಗೌರವವನ್ನು ರಕ್ಷಿಸಬೇಕಾದ ಪೊಲೀಸ್ ಇಲಾಖೆ ಇಂದು ಅಧಿಕಾರಿಗಳೇ ಕಾನೂನು ಮುರಿದ, ನಗೆಪಾಟಲಿಗೀಡಾದ ಘಟನೆಗಳಿಗಾಗಿ ಸುದ್ದಿ ಆಗಿದೆ. ಅಪರಾಧಿಗಳನ್ನು ಹಿಡಿಯುವ ಪೊಲೀಸರೇ ಇಂತಹ ನಗೆಪಾಟಲಿಗೆ ಈಡಾಗಿದ್ದಾರೆ ಎಂದು ದೂರಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅನೇಕ ಗಂಭೀರ ಆರೋಪಗಳಿದ್ದರೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರ ಈ ರೀತಿಯ ವರ್ತನೆಗೆ ಪರೋಕ್ಷ ರಕ್ಷಣೆ ನೀಡುತ್ತಿದೆಯೇ ಎಂಬ ಅನುಮಾನ ಸಹಜವಾಗಿ ಮೂಡುತ್ತಿದೆ. ಶಿಸ್ತಿನ ಇಲಾಖೆಯ ಗೌರವ ಸಾರ್ವಜನಿಕರ ಮುಂದೆ ಮಣ್ಣಾಗುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿಕೊಂಡಿರುವುದು ಅಸಹ್ಯ ಅನ್ನಿಸುತ್ತದೆ ಎಂದು ಹೇಳಿದರು.
ಅಪರಾಧ ತಡೆಯುವಲ್ಲಿ ರಾಜ್ಯ ಪೊಲೀಸ್ ವಿಫಲ
ಒಂದೆಡೆ ಪೊಲೀಸ್ ಇಲಾಖೆಯೊಳಗಿನ ಅಶಿಸ್ತು ಮತ್ತು ಅನಾಚಾರ, ಮತ್ತೊಂದೆಡೆ ಅಪರಾಧಿಗಳ ರಾಜಾರೋಷ. ಪೊಲೀಸ್ ಕಮಿಷನರ್ ಕಚೇರಿಯ ಮೂಗಿನ ಕೆಳಗೇ ಹಣ ಲೂಟಿ ಆಗುತ್ತದೆ ಎಂದರೆ, ಸಾಮಾನ್ಯ ನಾಗರಿಕನ ಸುರಕ್ಷತೆಗೆ ಯಾವ ಭರವಸೆ ಉಳಿದಿದೆ?. ರಾಜ್ಯದಲ್ಲಿ ಎಟಿಎಂ ಲೂಟಿ, ಬ್ಯಾಂಕ್ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಪತ್ತೆ ಕಾರ್ಯದಲ್ಲಿ ಇಲಾಖೆ ನಿರಂತರವಾಗಿ ವಿಫಲವಾಗುತ್ತಿದೆ. ಪೊಲೀಸರ ಗಮನ ಅಪರಾಧಿಗಳ ಮೇಲೆ ಇದೆಯೋ, ಅಥವಾ ರಾಜಕೀಯ ಒತ್ತಡ ಮತ್ತು 'ಕಲೆಕ್ಷನ್ ವ್ಯವಸ್ಥೆ' ಮೇಲೆಯೋ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.
ಕರ್ನಾಟಕದಲ್ಇ ಡ್ರಗ್ಸ್ ಜಾಲ ಹಳ್ಳಿಗಳವರೆಗೂ ವಿಸ್ತರಿಸಿದೆ. ಶಾಲಾ-ಕಾಲೇಜುಗಳ ಸುತ್ತ ಗಾಂಜಾ, ಮಾದಕ ವಸ್ತುಗಳ ವ್ಯಾಪಾರ ನಡೆಯುತ್ತಿದ್ದರೂ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರತಿಯೊಂದು ಪ್ರಶ್ನೆಗೆ 'ತನಿಖೆ ನಡೆಯುತ್ತಿದೆ', "ನನಗೆ ಗೊತ್ತಿಲ್ಲ" ಎಂಬ ಉತ್ತರ ಹೇಳುತ್ತಿದ್ದಾರೆ. ರಾಜ್ಯದಲ್ಲಿನ ಡ್ರಗ್ಸ್ ದಂಧೆ ಪತ್ತೆ ಹಚ್ಚಲು ಅನ್ಯರಾಜ್ಯದ ಪೊಲೀಸರು ಬರಬೇಕಾಗಿರುವುದು ನಾಚಿಕೆಗೇಡಿನ ಸಂಗತಿ. ಪರಿಸ್ಥಿತಿ ಹೀಗೆ ಮುಂದುವರೆದರೆ ಕರ್ನಾಟಕದ ಒಂದು ತಲೆಮಾರು ಮಾದಕ ವಸ್ತುಗಳ ನಶೆಗೆ ಬಲಿಯಾಗುವುದು ನಿಶ್ಚಿತ ಎಂದು ಅವರು ಎಚ್ಚರಿಸಿದರು.
ಇಲಾಖೆ ಮೇಲೆ ಗೃಹ ಸಚಿವರ ಹಿಡಿವಿಲ್ಲವೇ?
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನಿಮ್ಮ ಇಲಾಖೆಯ ಅಧಿಕಾರಿಗಳು ಕಚೇರಿಯೊಳಗೇ ಅನಾಚಾರ ಎಸಗುತ್ತಿದ್ದರೂ ನೀವು ಮೌನವಾಗಿರುವುದು, ಇಲಾಖೆಯ ಮೇಲಿನ ನಿಮ್ಮ ಹಿಡಿತದ ಕೊರತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ಗೃಹ ಇಲಾಖೆಯ ಮೇಲೆ ತಮಗೆ ಆಸಕ್ತಿ ನಿಯಂತ್ರಣವೇ ಇಲ್ಲದಿದ್ದರೆ, ಆ ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವ ನೈತಿಕ ಹಕ್ಕು ನಿಮಗಿಲ್ಲ? ಎಂದು ಅವರು ಟೀಕಿಸಿದರು.
ಮಹಿಳೆಯರು, ಯುವಕರು, ಹಿರಿಯ ನಾಗರಿಕರು ಬೀದಿಯಲ್ಲಿ ಸುರಕ್ಷಿತವಾಗಿಲ್ಲವೆಂಬ ಭಾವನೆ ಇದೆ. ಅದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಸಮರ್ಥ ಆಡಳಿತವೇ ಕಾರಣ. ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ 'ಬಿ-ಟೀಮ್' ಆಗಿ ಬಳಸುತ್ತಿದೆಯೇ? ಜನಸಾಮಾನ್ಯರಿಗೆ ನ್ಯಾಯ ಸಿಗದ ಈ ವ್ಯವಸ್ಥೆಗೆ ಯಾರು ಹೊಣೆ? ಇದು ಇಂದು ಜನಸಾಮಾನ್ಯರು ಕೇಳುತ್ತಿರುವ ಪ್ರಶ್ನೆಗಳು.
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೃಹ ಇಲಾಖೆಯ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಅಸಮರ್ಥ ಗೃಹ ಸಚಿವರ ರಾಜೀನಾಮೆ ಪಡೆಯಿರಿ. ರಾಜ್ಯದ ಜನರ ಸುರಕ್ಷತೆಯೊಂದಿಗೆ ಆಟವಾಡಬೇಡಿ. ಕಾನೂನು ಸುವ್ಯವಸ್ಥೆಗೆ ಕಳಂಕ ಬಂದರೆ ರಾಜ್ಯದ ವರ್ಚಸ್ಸು, ಆರ್ಥಿಕ ವ್ಯವಸ್ಥೆ, ಹೂಡಿಕೆ, ಕೈಗಾರಿಕೋದ್ಯಮ, ಉದ್ಯೋಗ ಸೃಷ್ಟಿ ಮೇಲೆ ದೀರ್ಘಕಾಲೀನ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿ ಗೃಹ ಸಚಿವರನ್ನು ಬದಲಿಸಿ ಎಂದು ಅವರು ಆಗ್ರಹಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications