ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಲ್ಕ್‌ಬೋರ್ಡ್‌ ಸಂಚಾರ ದಟ್ಟಣೆಗೆ ಪರಿಹಾರ, ಹೊಸ ಫ್ಲೈಓವರ್: ಅಶೋಕ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 07: ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆಯನ್ನು ಕಂದಾಯ ಸಚಿವ ಆರ್‌ ಅಶೋಕ್‌ ಅವರು ಇಂದು ಉದ್ಘಾಟಿಸಿದರು.

Recommended Video

Namma Metro ಇಂದಿನಿಂದ ಪುನರಾರಂಭ, ಆದರೆ ಷರತ್ತುಗಳು ಅನ್ವಯ | Oneindia Kannada

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರಕಾರದ ಉದ್ದೇಶವಾಗಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ಕೊನೆಗೂ ನನಸಾದ ಸಿಲ್ಕ್ ಬೋರ್ಡ್ ಜಂಕ್ಷನ್ ಕಾರಿಡಾರ್ ಯೋಜನೆ! ಕೊನೆಗೂ ನನಸಾದ ಸಿಲ್ಕ್ ಬೋರ್ಡ್ ಜಂಕ್ಷನ್ ಕಾರಿಡಾರ್ ಯೋಜನೆ!

ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ರಸ್ತೆ ನಿರ್ಮಾಣದ ಕಾರ್ಯ ಒಂದು ಹಂತ ಪೂರ್ಣ ಆಗಿದೆ. ಇನ್ನು ಕೆಲವು ಭಾಗದ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಬೆಂಗಳೂರು ನಗರ ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಸೌಕರ್ಯ ಕೋಡುವ ದೃಷ್ಟಿಯಿಂದ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯ ಆಗುತ್ತಿದೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯದ್ದೇ ಸಮಸ್ಯೆ. ಸಿಲ್ಕ್‌ ಬೋರ್ಡ್‌ ನಲ್ಲಿ ನಾವೂ ಕೂಡಾ ಹಲವಾರು ಬಾರಿ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದೇವೆ. ಸಂಚಾರ ದಟ್ಟಣೆ ನಿವಾರಣೆಗೆ ಈ ರಸ್ತೆ ಕೊಡುಗೆ ನೀಡಲಿದೆ.

 15 ಕೋಟಿ ರೂಪಾಯಿ ವೆಚ್ಚದ ಹೊಸ ರಸ್ತೆ

15 ಕೋಟಿ ರೂಪಾಯಿ ವೆಚ್ಚದ ಹೊಸ ರಸ್ತೆ

ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಲಾಗಿದೆ. ಇದಕ್ಕೆ ಈ ಭಾಗದ ಶಾಸಕರಾದ ಸತೀಶ್‌ ರೆಡ್ಡಿ ಹಾಗೂ ಬೊಮ್ಮನಹಳ್ಳಿ ಬಿಬಿಎಂಪಿ ಸದಸ್ಯರು ಹಾಗೂ ಉಪಮಹಾಪೌರರಾದ ರಾಮ್‌ ಮೋಹನ್‌ ರಾಜ್‌ ಅವರ ಒತ್ತಾಸೆ ಬಹಳಷ್ಟಿದೆ. ರಾಜ್ಯಕ್ಕೆ ಹೆಚ್ಚು ಸಂಪನ್ಮೂಲ ನೀಡುವ ನಗರ ಬೆಳೆಯುತ್ತಿರುವಂತೆ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

 ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಯಬೇಕು

ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಯಬೇಕು

ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಯಬೇಕು. ನಡೆಯಬೇಕು ಎನ್ನುವ ಉದ್ದೇಶದಿಂದಲೇ ಸಮಿತಿಗಳನ್ನು ರಚನೆ ಮಾಡಿದ್ದೇವೆ. ವಾರ್ಡಗಳನ್ನು ಪುನರ್‌ ರಚನೆ ಯಂತಹ ಕಾರ್ಯಗಳು ಅಧಿಕಾರಿಗಳಿಗೆ ಸಂಬಂಧಪಟ್ಟ ವಿಷಯವಾಗಿದೆ ಎಂದು ಹೇಳಿದರು. ಚುನಾವಣೆ ನಡೆಸುವುದು ಸರಕಾರದ ಉದ್ದೇಶವಾಗಿದ್ದು, ಇದಕ್ಕೆ ಬೇಕಾದ ತಯಾರಿ ನಡೆಯುತ್ತಿದೆ ಎಂದು ಅಶೋಕ್ ಹೇಳಿದರು.

ರಾಜ್ಯದಲ್ಲೇ ಇದು ಅತಿ ವೈಶಿಷ್ಟ್ಯ ಕಾರ್ ಪಾರ್ಕ್: ಆರ್ ಅಶೋಕ್ರಾಜ್ಯದಲ್ಲೇ ಇದು ಅತಿ ವೈಶಿಷ್ಟ್ಯ ಕಾರ್ ಪಾರ್ಕ್: ಆರ್ ಅಶೋಕ್

 ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆ

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆ

ಟ್ರೋಲ್‌ಗಳು ಹಾಗೂ ವೈರಲ್‌ ವಿಡಿಯೋಗಳ ಮೂಲಕ ವಿಶ್ವವಿಖ್ಯಾತಿಯನ್ನು ಪಡೆದಿರುವ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನ ಸಂಚಾರ ದಟ್ಟಣೆಯನ್ನು ಸರಾಗಗೊಳಿಸುವ ಬೊಮ್ಮನಹಳ್ಳಿ - ಬಿ.ಟಿ.ಎಂ ಲೇಔಟ್‌ ರಸ್ತೆ ಹಾಗೂ ಸಂಪರ್ಕ ಸೇತುವೆಯನ್ನು ಈ ದಿನ ವಾಹನ ಸವಾರರ ಬಳಕೆಗೆ ಮುಕ್ತಗೊಳಿಸಲಾಗಿದೆ.

ಪ್ರತಿದಿನ ಲಕ್ಷಾಂತರ ವಾಹನ ಸವಾರರು ಈ ಜಂಕ್ಷನ್‌ ನಲ್ಲಿ ಸಂಚಾರ ದಟ್ಟಣೆಯ ಕಾರಣ ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದರು. ಈ ಬವಣೆಯನ್ನು ನಿವಾರಿಸುವ ದೃಷ್ಟಿಯಿಂದ ಕೈಗೊಂಡ ಕಾಮಗಾರಿಯ ಪೂರ್ಣಗೊಂಡಿದೆ. ಈ ಸಂಪರ್ಕ ರಸ್ತೆಯ ಕಾರಣದಿಂದಾಗಿ ಸುಮಾರು 50 ಸಾವಿರ ವಾಹನ ಸವಾರರು ಸಂಚಾರ ದಟ್ಟಣೆಯ ಬವಣೆಯಿಂದ ಬಚಾವ್‌ ಆಗಲಿದ್ದಾರೆ.

 ಗಣ್ಯಾತಿಗಣ್ಯರ ಉಪಸ್ಥಿತಿ

ಗಣ್ಯಾತಿಗಣ್ಯರ ಉಪಸ್ಥಿತಿ

ಬೊಮ್ಮಹಳ್ಳಿ ಹಾಗೂ ಬಿ.ಟಿ.ಎಂ ಪ್ರದೇಶದ ಜನರ ಅನುಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಬೊಮ್ಮನಹಳ್ಳಿ ವಾರ್ಡ್ ನ ಪಾಲಿಕೆ ಸದಸ್ಯರೂ ಆಗಿರುವ ಉಪ ಮೇಯರ್ ಸಿ.ಆರ್.ರಾಮಮೋಹನ್ ರಾಜ್ ಅವರು ತಿಳಿಸಿದರು.

ರಸ್ತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ, ಬಿಟಿಎಂ ಲೇಔಟ್ ನ ಶಾಸಕ ರಾಮಲಿಂಗಾ ರೆಡ್ಡಿ, ಮೇಯರ್ ಗೌತಮ್‌ ಕುಮಾರ್‌ ಸೇರಿದಂತೆ ಬಿಬಿಎಂಪಿಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

English summary
Minister for Revenue R Ashoka today(Sept 07) inaugurated road connecting Bommanhalli and BTM Layout road which will ease Traffic congestion at Silk Board junction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X