ಅನಂತಕುಮಾರ್ ದಾರಿ ನಮಗೆಲ್ಲ ಆದರ್ಶನೀಯ: ಆರ್ ಅಶೋಕ್
ಬೆಂಗಳೂರು ನ 13: ದಿವಂಗತ ಅನಂತಕುಮಾರ್ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ದಿಗೆ ಅನುಸಸರಿಸಿದ ದಾರಿ ನಮಗೆಲ್ಲ ಆದರ್ಶನೀಯ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಹೇಳಿದರು.
ದಿವಂಗತ ಅನಂತಕುಮಾರ್ 2 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಲಾಲ್ಬಾಗ್ ಬಳಿಯ ಅನಂತ ಸ್ಮೃತಿ ವನದಿಂದ ಆಯೋಜಿಸಲಾಗಿದ್ದ ಅನಂತ ಸೃತಿ ನಡಿಗೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಬೆಂಗಳೂರನ್ನು ಇನ್ನಷ್ಟು ಸುಂದರಗೊಳಿಸಲು ಹಲವಾರು ಕನಸುಗಳನ್ನು ಹೊತ್ತಿದ್ದ ಅನಂತಕುಮಾರ್ ನಡೆದ ದಾರಿ ನಮಗೆ ದಾರಿ ದೀಪವಾಗಿದೆ. ಅವರು ಹಾಕಿಕೊಟ್ಟ ಅಭಿವೃದ್ದಿಯ ಮಾರ್ಗದಲ್ಲಿ ನಡೆಯುವ ಮೂಲಕ ಬೆಂಗಳೂರನ್ನ ಇನ್ನಷ್ಟು ಸುಂದರಗೊಳಿಸೋಣ. ಅದಮ್ಯ ಚೇತನ ಸಂಸ್ಥೆಯ ಮೂಲಕ ಕೋಟ್ಯಾಂತರ ಜನರ ಹಸಿವನ್ನು ನೀಗಿಸುವ ಕಾರ್ಯವನ್ನು ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ಮಾಡುತ್ತಿದ್ದಾರೆ. ದಿವಂಗತ ಅನಂತಕುಮಾರ್ ಅವರ ಆಶಯವನ್ನು ಸರಿಯಾದ ದಾರಿಯಲ್ಲಿ ನಡೆಸುವಲ್ಲಿ ಅವರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಅನಂತ ಸ್ಮೃತಿ ನಡಿಗೆ ಅಂಗವಾಗಿ ಪಂಜಿನ ಮೆರವಣಿಗೆಯಲ್ಲಿ ಸಾಗಿದ ಅಭಿಮಾನಿಗಳು ಪ್ರಮುಖರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡುತ್ತಾ ಸಾಗಿದರು. ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಮುಖ್ಯಸ್ಥೆ ಡಾ ತೇಜಸ್ವಿನಿ ಅನಂತಕುಮಾರ್, ಶಾಸಕ ಉದಯ ಗರುಡಚಾರ್, ರವಿ ಸುಬ್ರಮಣ್ಯ ಹಾಗು ಪಾಲಿಕೆಯ ಮಾಜಿ ಸದಸ್ಯರುಗಳು ಭಾಗವಹಿಸಿದ್ದರು. ಲಾಲ್ ಬಾಗ್ ವೆಸ್ಟ್ ಗೇಟ್ ಎದುರು ಇರುವ ಅನಂತ ಸ್ಮೃತಿ ವನದಿಂದ ಪ್ರಾರಂಭಿಸಿ ಅದಮ್ಯಚೇತನದವರೆಗೆ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು.
Recommended Video

-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications