ಇದನ್ನು ಮಾಡಿ ಮುನಿರತ್ನ ವಿರುದ್ಧ ಕ್ರಮ ಕೈಗೊಂಡರೆ ತಕರಾರಿಲ್ಲ: ಆರ್.ಅಶೋಕ
ಬೆಂಗಳೂರು, ಸೆಪ್ಟಂಬರ್ 15: ಗುತ್ತಿಗೆದಾರರಿಗೆ ಹಣಕ್ಕೆ ಬೇಡಿಕೆ, ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ ಆರ್.ಆರ್ ನಗರ ಶಾಸಕ, ಮಾಜಿ ಸಚಿವ ಮುನಿರತ್ನ ಅವರನ್ನು ಬಂಧಿನವಾಗಿದೆ. ಧ್ವೇಷ ರಾಜಕಾರಣದಿಂದಾಗಿ ಬಂಧಿಸಲಾಗಿದೆ. ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.
ಸುದ್ದಿಗಾರರ ಜೊತೆಗೆ ಶಾಸಕರ ಬಂಧನ ಕುರಿತು ಮಾತನಾಡಿದ ಆರ್.ಅಶೋಕ ಅವರು, ಪ್ರಕರಣಕ್ಕೆ ಸಂಬಂಧಿಸಂತೆ ಬೆದರಿಕೆ, ಲಂಚ ಬೇಡಿಕೆ ಇದೆ. ಹಾಗಾದರೆ ಆರೋಪದಲ್ಲಿನ ಆ ಧ್ವನಿ ಅವರದ್ದೆ ಎಂಬುದು ಎಷ್ಟು ಸತ್ಯ. ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಬೇಕಿತ್ತು?

ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಆ ಪ್ರಕರಣವೀಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ ನೋಟಿಸ್ ನೀಡದೆ ಮುನಿರತ್ನ ಅವರನ್ನು ಬಂಧಿಸಲಾಗಿದೆ.
ನಮ್ಮ ತಕರಾರಿಲ್ಲ, ಸತ್ಯ ಗೊತ್ತಾಗಬೇಕಷ್ಟೇ
ಇದೊಂದು ಆತುರದ ಕ್ರಮವಾಗಿದೆ. ಶಾಸಕರ ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ, ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ತಕರಾರು ಮಾತಾಡುತ್ತಿರಲಿಲ್ಲ. ಪ್ರಕರಣದಲ್ಲಿ ಸತ್ಯ ಪರಿಶೀಲನೆ ಆಗಬೇಕು ಎಂದು ಅವರು ತಿಳಿಸಿದರು.
ತಾವು ಜಾತಿ ನಿಂದನೆ ಮಾಡಿಲ್ಲ ಎಂದು ಶಾಸಕ ಮುನಿರತ್ನ ಅವರೇ ಹೇಳಿದ್ದಾರೆ. ಅವರ ಮೇಲಿನ ಆರೋಪ ಸಾಬೀತು ಕೂಡ ಆಗಿಲ್ಲ. ಇದು ಪೂರ್ವ ಯೋಜಿತವಾದ ಕೃತ್ಯವೆಂಬುದು ಎಲ್ಲಿಗೂ ತಿಳಿದಿದೆ. ನಾನು ಈ ರೀತಿ ಪ್ರಕರಣ ದಾಖಲಾದಾಗ ಪರಿಶೀಲಿಸಿಯೇ ಕ್ರಮ ಕೈಗೊಳ್ಳಬೇಕು.

ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ
ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ಪೊಲೀಸ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಶಾಸಕನನ್ನು ಸಿಎಂ ಮನೆಗೆ ಕರೆಸಿಕೊಂಡು ಕಾಫಿ ಕೊಟ್ಟಿದ್ದರು. ಕೃಷಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದರು ಸಚಿವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ? ಎಂದು ಅವರು ಪ್ರಶ್ನಿಸಿದರು.
ರಾಜ್ಯ ಸರ್ಕಾರ ನಮ್ಮ ಮೇಲೆ ಎಷ್ಟೇ ಪ್ರಕರಣ ದಾಖಸಿದರೂ ಬಿಜೆಪಿ ಹೆದರುವುದಿಲ್ಲ. ಇದೆಲ್ಲ ನೋಡಿದರೆ ಸರ್ಕಾರಕ್ಕೆ ಭಯ ಬಂದಿದೆ. ಪ್ರತಿ ದಿನ ವಸೂಲಿ, ಭ್ರಷ್ಟಾಚಾರ ನಡೆಯುತ್ತಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಆದ್ದರಿಂದ ಹೀಗೆ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಅವರು ಆಪಾದಿಸಿದರು.
ಜನರ ಗಮನ ಬೇರೆಡೆ ಸೆಳೆಯಲು ಶಾಸಕರ ಬಂಧನ?
ಸಾಲು ಸಾಲು ಭ್ರಷ್ಟಾಚಾರ, ಕೋಮುಗಲಭೆ ವಿಚಾರವಾಗಿ ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಮಾಡಲಾಗಿದೆ. ಇಂತಹ ಕೆಲಸ ಜಿ.ಪರಮೇಶ್ವರ್ ಅವರಿಗೆ ಶೋಭೆಯಲ್ಲ. ಇದು ತುಂಬಾ ಹಳೆಯ ಪ್ರಕರಣವಾದರೂ ಸಹಿತ ದಿಢೀರನೆ ಬಂಧಿಸಿದ್ದು ತಪ್ಪು. ಸಾಮಾನ್ಯ ವ್ಯಕ್ತಿ ನೇರವಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಇದು ಪೂರ್ವ ಯೋಜಿತ ಎಂದು ಅವರು ದೂರಿದರು.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮತಾಂಧರು ಬಾಂಬ್, ಮಚ್ಚು ಬಳಸಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಕಾಂಗ್ರೆಸ್ ನ ಮುಸ್ಲಿಮ್ ಓಲೈಕೆ ರಾಜಕಾಣದಿಂದಲೇ ಹೀಗಾಗಿದೆ. ಹಿಂದೂಗಳು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.












Click it and Unblock the Notifications