ದುಬಾರಿ ಬೆಂಗಳೂರು: ತೆರಿಗೆ ಸಂಗ್ರಹಕ್ಕೆ ತಕ್ಕಂತೆ ಮೂಲಸೌಕರ್ಯ ಇಲ್ಲ: ಆರ್.ಅಶೋಕ್
ಬೆಂಗಳೂರು, ನವೆಂಬರ್ 08: ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಜನರಿಂದ ತೆರಿಗೆ ಸಂಗ್ರಹ ಮಾಡುತ್ತಿದೆ. ಆದರೆ ರಸ್ತೆಗುಂಡಿ ಮುಚ್ಚಿಸಲ್ಲ, ಕಸ ವಿಲೇವಾರಿ ಮಾಡುತ್ತಿಲ್ಲ. ಹಣ ಸಂಗ್ರಹಿಸುವ ಸರ್ಕಾರ ಅಗತ್ಯ ಮೂಲಭೂತ ಸೌಕರ್ಯವನ್ನು ಜನರಿಗೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇವಲ ಗ್ಯಾರಂಟಿಯ ಹೆಸರು ಹೇಳಿಕೊಂಡ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಲ್ಲಿ ಬೆಂಗಳೂರಿಗೆ ಅನುದಾನ ನೀಡಿಲ್ಲ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಒಟ್ಟು 1,800 ಕೋಟಿ ರೂಪಾಯಿ ವ್ಯಯಿಸಿ ರಸ್ತೆಗುಂಡಿ ದುರಸ್ತಿ ಮಾಡಿದೆ ಎಂದು ಹೇಳಿಕೊಂಡಿದೆ. ಆದರೆ ಮುಚ್ಚಿದ ಗುಂಡಿಗಳಲ್ಲಿ ಮತ್ತೆ ಗುಂಡಿ ಸೃಷ್ಟಿಯಾಗಿವೆ. ಬೆಂಗಳೂರಿನ ಜನರಿಗೆ ಈ ಸರ್ಕಾರದ ಕಾರ್ಯವೈಖರಿ ದೊಡ್ಡ ಶಾಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ವಾರ ಗಡುವು ಕೇಳಿದ್ದಾರೆ. ಈಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೇಳಿ ಎನ್ನುತ್ತಿದ್ದಾರೆ. ಈ ಸರ್ಕಾರದ ನಡುವೆ ಹೊಂದಾಣಿಕೆಯೇ ಇಲ್ಲದೇ ನಾಯಕರು ಬೇಜವಾಬ್ದಾರಿ ಮಾತುಗಳು ಆಡುತ್ತಿದ್ದಾರೆ ಎಂದು ದೂರಿದರು.

ಜನರಿಗೆ ಇದು ದುಬಾರಿ ಬೆಂಗಳೂರು
ರಸ್ತೆಗುಂಡಿಯಿಂದಾಗಿ ಜನರು ಸಾಯುತ್ತಿದ್ದಾರೆ. ಈ ಬಗ್ಗೆ ಕೂಡಲೇ ಸರ್ಕಾರ ಕ್ರಮ ವಹಿಸಬೇಕಿತ್ತು. ರಸ್ತೆಗಳನ್ನು ದುರಸ್ತಿ ಮಾಡಿಲ್ಲವೆಂದರೆ ಈ ಸರ್ಕಾರ ಸತ್ತುಹೋಗಿದೆ ಎಂದೇ ಹೇಳಬೇಕು. ಜಲಮಂಡಳಿಯವರು ರಸ್ತೆ ಅಗೆದರೆ ನಂತರ ಅದರಲ್ಲೇ ಬೈಕ್ ಹೋಗಬಹುದು. ಇಂತಹ ಸುರಂಗ ಮಾರ್ಗಗಳನ್ನು ಇವರು ತೋಡುತ್ತಿದ್ದಾರೆ. ಪಣತ್ತೂರಿನಲ್ಲೇ ಇದೇ ರೀತಿಯಾಗಿದೆ. ಪಾದಚಾರಿ ಮಾರ್ಗಗಳಲ್ಲೂ ಓಡಾಡಲು ಆಗುತ್ತಿಲ್ಲ. ಬೆಂಗಳೂರನ್ನು ದುಬಾರಿ ಮಾಡಿದ್ದಾರೆ ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ನಂತರ ಗುತ್ತಿಗೆದಾರರು ಕೆಲಸ ಮಾಡಲು ಆಗುತ್ತಿಲ್ಲ. ಇದರಿಂದಾಗಿ ರಸ್ತೆ ಬದಿಗಳಲ್ಲಿ ಕಸದ ರಾಶಿ ಕಂಡು ಬರುತ್ತಿದೆ. ಒಂದು ಮನೆಗೆ 720 ರೂಪಾಯಿ ಕಸ ಶುಲ್ಕ ಸಂಗ್ರಹಿಸುತ್ತಿದ್ದಾರೆ. ಅಪಾರ್ಟ್ಮೆಂಟ್ಗಳಿಗೆ 1800 ರೂ. ಇದ್ದ ಶುಲ್ಕವನ್ನು 17,800 ರೂ. ಮಾಡಿದ್ದಾರೆ. ಆಸ್ಪತ್ರೆಗಳಿಗೆ 9600 ರೂ. ಶುಲ್ಕವಿದ್ದು ಅದನ್ನು 2 ಲಕ್ಷ ರೂ. ಮಾಡಿದ್ದಾರೆ. ಹೀಗೆ ಕಸಕ್ಕಾಗಿ ಕೋಟ್ಯಂತರ ಶುಲ್ಕ ಸಂಗ್ರಹಿಸಿದರೂ ಕಸದ ಮುಕ್ತ ಆಗಿಲ್ಲ. ಇದು ಗಾರ್ಬೇಜ್ ಸಿಟಿಯಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ದೇಶದ್ರೋಹಿಗಳಿಗೆ ಅನುಕೂಲವಾಗುತ್ತದೆ. ಜೈಲುಗಳಲ್ಲಿ ಮೊಬೈಲ್, ಸಿಮ್ ಎಲ್ಲವೂ ದೊರೆಯುತ್ತದೆ. ಪರಪ್ಪನ ಅಗ್ರಹಾರ ಉಗ್ರರ ಸ್ವರ್ಗವಾಗಿದೆ ಎಂದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications