"ಕಾಂಗ್ರೆಸ್ ಸಿಎಂ ಕುರ್ಚಿ ಒಳಜಗಳ ತಾರಕಕ್ಕೆ: ಮಲ್ಲಿಕಾರ್ಜುನ ಖರ್ಗೆಗೂ ಸಿಎಂ ಆಸೆ''

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಲಹದಿಂದ ಹೆಚ್ಚು ಗೊಂದಲ ಉಂಟಾಗಿದೆ. ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ರಾಜ್ಯದ ಮುಖ್ಯಮಂತ್ರಿ ಆಗಲು ಪ್ರಯತ್ನ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವ್ಯಂಗ್ಯವಾಡಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿ ಕಲಹದಿಂದಾಗಿ ಇಡೀ ಸರ್ಕಾರ ಗೊಂದಲದ ಗೂಡಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಹೇಳಿಕೆ ನೀಡಿ ಇನ್ನಷ್ಟು ಗೊಂದಲ ಉಂಟುಮಾಡಿದ್ದಾರೆ. ಮುಂದೆ ನನ್ನ ಪರ್ವ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದಾರೆ. ಆ ಪರ್ವಕ್ಕೆ ಕಲ್ಲು ಬಿದ್ದಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಮಧ್ಯ ಪ್ರವೇಶ ಮಾಡಿ ನನಗೂ ಆಸೆಯಿದೆ, ಹಿಂದೆ ನನಗೆ ಮೋಸವಾಗಿದೆ ಎಂದು ಹೇಳಿದರು.

R Ashoka

ಹೈಕಮಾಂಡ್‌ನಿಂದ ಖರ್ಗೆಗೆ ಗ್ರೀನ್ ಸಿಗ್ನಲ್

ಬಹುಶಃ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಅವರು ಸಿಎಂ ಆಗಲು ಗ್ರೀನ್‌ ಸಿಗ್ನಲ್‌ ಸಿಕ್ಕಿರಬಹುದು. ಖರ್ಗೆ ಸಿಎಂ ಆಗಬೇಕೆಂದು ಈಗಾಗಲೇ ಎಲ್ಲರೂ ಹೇಳಿದ್ದಾರೆ. ನಾನು ಸಿಎಂ ಆಗಲು ಸಿದ್ಧನಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಇದುವರೆಗೆ ಅವರು ಬಹಳ ಪ್ರಯತ್ನ ಮಾಡಿದ್ದರೂ ಸಿಎಂ ಆಗಿರಲಿಲ್ಲ. ಈ ಸಮಯದಲ್ಲಾದರೂ ಸಿಎಂ ಆಗೋಣ ಎಂದು ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲೀಗ ಇಬ್ಬರ ಜಗಳ ಮೂರನೆಯವನಿಗೆ ಲಾಭ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕ; ಹೈ-ಸ್ಪೀಡ್ ರೈಲು, ವಿಮಾನ ಸೇವೆ, ಟೌನ್‌ಶಿಪ್ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ
ಕರ್ನಾಟಕ; ಹೈ-ಸ್ಪೀಡ್ ರೈಲು, ವಿಮಾನ ಸೇವೆ, ಟೌನ್‌ಶಿಪ್ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

ಸಿನಿಮಾದ ಕ್ಲೈಮಾಕ್ಸ್‌ನಲ್ಲಿ ಆಗುವಂತೆಯೇ ಮಲ್ಲಿಕಾರ್ಜುನ ಖರ್ಗೆ ಬಂದಿದ್ದಾರೆ. ಮಾತುಕತೆಗೆ ಇನ್ನಷ್ಟು ಸಮಯ ಬೇಕೆಂದು ಅವರು ಹೇಳಿದ್ದಾರೆ. ಹಾಗೆಯೇ ಆದರೆ ಸಿಎಂ ಬದಲಾವಣೆ ಬಹಳ ತಡವಾಗುತ್ತದೆ. ಆ ವೇಳೆಗೆ ಚುನಾವಣೆ ಸಮೀಪ ಬಂದಿರುತ್ತದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಾದಂತೆ ಕಾಂಗ್ರೆಸ್‌ ಗೊಂದಲದ ಗೂಡಾಗಿ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದರು.

ಮುಸ್ಲಿಮ್ ಮುಖಂಡರ ವಿರುದ್ಧ ಕ್ರಮ

ಇಡೀ ರಾಜ್ಯದಲ್ಲಿ ರಸ್ತೆಗಳು ಗುಂಡಿ ಬಿದ್ದಿವೆ. ಎಲ್ಲೂ ಅಭಿವೃದ್ಧಿ ನಡೆಯುತ್ತಿಲ್ಲ. ಇಂತಹ ಸಮಯದಲ್ಲಿ ದಾವಣಗೆರೆ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ವಿರುದ್ಧ ಕ್ರಮ ವಹಿಸಲಾಗಿದೆ. ಈಗ ಅದನ್ನು ಮರೆಮಾಚಲು ಮುಸ್ಲಿಮರಿಗೆ ಅನುದಾನ ನೀಡಲಾಗಿದೆ. ಆದರೆ ವಾಸ್ತವದಲ್ಲಿ ಮುಸ್ಲಿಮರ ಮನಸ್ಸು ಒಡೆದಿದೆ. ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಮುಸ್ಲಿಮರು ಕಾಂಗ್ರೆಸ್‌ಗೆ ಕೈ ಕೊಟ್ಟಿದ್ದಾರೆ ಎಂದರು.

ಮಳೆ ಹಾನಿಗೆ ಮುಖ್ಯಮಂತ್ರಿಯೇ ನೇರ ಕಾರಣ

ಬೆಂಗಳೂರಿನಲ್ಲಿ ಹದಿನೈದು ದಿನಕ್ಕೊಮ್ಮೆ ನಗರ ಪ್ರದಕ್ಷಿಣೆ ಮಾಡುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಮೂರು ತಿಂಗಳಿಗೊಮ್ಮೆಯೂ ನಗರ ಪ್ರದಕ್ಷಿಣೆ ಮಾಡಲಿಲ್ಲ. ಮಳೆಹಾನಿಗೆ ಯಾವುದೇ ಸಿದ್ಧತೆ ಮಾಡಿಕೊಳ್ಳದೇ ಏಳು ಜೀವಗಳ ಬಲಿಯಾಗಿದೆ. ಈ ಸಾವಿಗೆ ನ್ಯಾಯ ಕೊಡಿ ಎಂದು ಜನರು ಕೇಳಿದರೆ, ತಮ್ಮ ತಪ್ಪನ್ನು ಮುಚ್ಚಿಟ್ಟು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಒಂದು ತಿಂಗಳ ಮುನ್ನ ಸಭೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ಪಡೆದು ದುರಸ್ತಿ ಮಾಡಿಸಬೇಕಿತ್ತು ಎಂದು ದೂರಿದರು.

KSDL: ಉತ್ತರ ಕರ್ನಾಟಕದಲ್ಲಿ ಸಾಬೂನು ಉತ್ಪಾದನಾ ಘಟಕ; ಸರ್ಕಾರ ಅನುಮೋದನೆ
KSDL: ಉತ್ತರ ಕರ್ನಾಟಕದಲ್ಲಿ ಸಾಬೂನು ಉತ್ಪಾದನಾ ಘಟಕ; ಸರ್ಕಾರ ಅನುಮೋದನೆ

ನೀರು ನಿಲ್ಲುವ ಕಡೆ ನೀರು ಹರಿದುಹೋಗಲು ವ್ಯವಸ್ಥೆ ಮಾಡಬೇಕಿತ್ತು. ಏನೂ ಮಾಡದೆಯೇ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ, ಎಂಜಿನಿಯರ್‌ಗಳ ವಿರುದ್ಧ ಕ್ರಮ ವಹಿಸಿದ್ದಾರೆ. ಆಸ್ಪತ್ರೆ ಮುಖ್ಯಸ್ಥರು ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕೆಂದು ನೋಡುತ್ತಾರೆಯೋ ಹೊರತು, ಕಾಂಪೌಂಡ್‌ ದುರಸ್ತಿ ಮಾಡುವುದು ಅವರ ಜವಾಬ್ದಾರಿಯಲ್ಲ. ಈ ಸಾವುಗಳಿಗೆ ಮುಖ್ಯಮಂತ್ರಿಯೇ ನೇರ ಕಾರಣ. ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+