Metro fare hike: ಈ ಕಾರಣಕ್ಕೆ ಮೆಟ್ರೋ ದರ ಕಡಿಮೆ ಮಾಡಿ: ಅಶೋಕ್‌ ಹೇಳಿದ್ದೇನು?

ಬೆಂಗಳೂರಿನ ಜೀವನಾಡಿಯಾಗಿದ್ದ ನಮ್ಮ ಮೆಟ್ರೋ ಇದೀಗ ಟಿಕೆಟ್‌ ದರ ದಿಢೀರ್‌ ಏರಿಸುವ ಮೂಲಕ ಪ್ರಯಾಣಿಕರಿಗೆ ಶಾಕ್‌ ಕೊಟ್ಟಿದೆ. ಈ ದರ ಏರಿಕೆ ಬಗ್ಗೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ವಿಪಕ್ಷ ನಾಯಕ ಆರ್.ಅಶೋಕ್‌ ಕೂಡ ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಹಾಲು, ಬಸ್‌ ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನು ಏಕಾಏಕಿ ಶೇ 50ರವರೆಗೆ ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

R Ashoka Urges Karnataka Government To Reduce Namma Metro Fare

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಮೆಟ್ರೋ ದರ ಶೇ 50ರಷ್ಟು ಏರಿಕೆ ಮಾಡಿರುವುದರಿಂದ ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದೆ. ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ ಎಂದಿದ್ದಾರೆ.

ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ. ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದರ ಏರಿಕೆಯ ಬರೆಯಿಂದ ತತ್ತರಿಸುವ ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಕೊಟ್ಟಿದೆ ಕಾಂಗ್ರೆಸ್‌ ಸರ್ಕಾರ. ಬಸ್ ಟಿಕೆಟ್ ದರ ಹೆಚ್ಚಳದ ಬೆನ್ನಲ್ಲೇ ಬೆಂಗಳೂರಿನ ಜೀವನಾಡಿಯಾದ ಮೆಟ್ರೋ ಟಿಕೆಟ್ ದರ ಬರೋಬ್ಬರಿ ಶೇ 46ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದು ಜನಸಾಮಾನ್ಯರ ಲೂಟಿ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ದೆಹಲಿಯ ಜನತೆ ಕೊಟ್ಟ ಉತ್ತರವನ್ನು ಕರುನಾಡಿನ ಜನತೆ ಮುಂಬರುವ ದಿನಗಳಲ್ಲಿ ನೀಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಜೆಡಿಎಸ್‌ ಕಿಡಿ: ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಮೆಟ್ರೋ ಪ್ರಯಾಣ ದರವನ್ನು ಶೇ 46ರಷ್ಟು ಏರಿಕೆ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಸಿದ್ದರಾಮಯ್ಯ ಸರ್ಕಾರ ಮತ್ತೊಮ್ಮೆ ಬರೆ ಎಳೆದಿದೆ ಎಂದು ಜೆಡಿಎಸ್‌ ಪಕ್ಷ ಕೂಡ ಎಕ್ಸ್‌ನಲ್ಲಿ ವಿರೋಧ ವ್ಯಕ್ತಪಡಿಸಿದೆ.

ಬಸ್‌ ದರ, ಹಾಲಿನ ದರ, ವಿದ್ಯುತ್ ದರ, ಪೆಟ್ರೋಲ್‌-ಡೀಸೆಲ್‌ ದರ, ಮುದ್ರಾಂಕ ಶುಲ್ಕ, ಜನನ ಮರಣ ಪ್ರಮಾಣ ಪತ್ರ ಶುಲ್ಕ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಇದೀಗ ಮೆಟ್ರೋ ಪ್ರಯಾಣ ದರವನ್ನು ಏರಿಸಿದೆ. ರಾಜ್ಯದ ಜನರನ್ನು ಪ್ರತಿ ದಿನವೂ ಒಂದಲ್ಲ ಒಂದು ರೀತಿಯಲ್ಲಿ ಸುಲಿಗೆ ಮಾಡುವ ಮೂಲಕ ಖಜಾನೆ ತುಂಬಿಸಿಕೊಳ್ಳುತ್ತಿರುವ ಲೂಟಿಕೋರ ಕಾಂಗ್ರೆಸ್‌ ಸರ್ಕಾರ ಕರುನಾಡಿಗೆ ಶಾಪ ಎಂದು ಗುಡುಗಿದೆ.

ಮೆಟ್ರೋ ಹೇಳಿದ್ದೇನು?: ಪ್ರಯಾಣ ದರ ಏರಿಕೆ ಕುರಿತು ಮಾಹಿತಿ ಹಂಚಿಕೊಂಡಿರುವ ನಮ್ಮ ಮೆಟ್ರೋ (ಬಿಎಂಆರ್‌ಸಿಎಲ್)
ದರ ಪರಿಷ್ಕರಣೆ ಸಮಿತಿಯ ಶಿಫಾರಸ್ಸಿನಂತೆ ಇದೇ ಫೆಬ್ರವರಿ 9ರಿಂದ ನಮ್ಮ ಮೆಟ್ರೋದಲ್ಲಿ ಪರಿಷ್ಕೃತ ದರ ಜಾರಿಯಾಗಲಿದೆ. ಸ್ಮಾರ್ಟ್ ಕಾರ್ಡ್‌ಗಳ ಮೇಲೆ ಶೇ 5ರಷ್ಟು ರಿಯಾಯಿತಿ ಮುಂದುವರಿಯುತ್ತದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+