ಬರಪರಿಹಾರ ಹಣ ಬಿಡುಗಡೆಯಲ್ಲಿ ಕಾಂಗ್ರೆಸ್ ಪಾತ್ರವಿಲ್ಲ: ಆರ್.ಅಶೋಕ್ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಬರಗಾಲದಿಂತ ತತ್ತರಿಸಿದ್ದ ಜನರಿಗೆ ಕೇಂದ್ರ ಸರ್ಕಾರ 3,454 ಕೋಟಿ ರೂ. ಪರಿಹಾರ ನೀಡಿದೆ. ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದ ವಿಪಕ್ಷ ಆರ್. ಅಶೋಕ್ ಆಡಳಿತ ಪಕ್ಷ ಕಾಂಗ್ರೆಸ್‌ಗೆ ಸವಾಲು ಹಾಕಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಪರಿಹಾರ ನೀಡಿದೆ. ರಾಜ್ಯದಲ್ಲಿ ಹಿಂದಿನ ನಮ್ಮ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರವನ್ನು ಈಗಿನ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು.
ಬರಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್ ಶ್ರಮವಿಲ್ಲ
ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು.

ಡಿಬಿಟಿ ಮೂಲಕವೇ ಹಣ ನೀಡಿ
ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು. ಡಿಬಿಟಿ ಮೂಲಕವೇ ಹಣ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ. ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ ಎಂದು ದೂರಿದರು.
ಮುಸ್ಲಿಮರ ಓಲೈಕೆ ರಾಜಕಾರಣ
ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವ ನಿರ್ಧಾರದ ಮೂಲಕ ಓಲೈಕೆ ರಾಜಕಾರಣ ಮಾಡುತ್ತಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ದೇಶದ ಸಂಪತ್ತಿನ ಹಕ್ಕು ಮುಸ್ಲಿಮರಿಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಹೀಗಾಗಿ ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ.
ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ನೀಡಬಾರದು ಎಂದು ಹೇಳಲಾಗಿದೆ. ಆದರೆ ಇದನ್ನು ಮೀರಿ ಕಾಂಗ್ರೆಸ್ ಮೀಸಲು ನೀಡಿದೆ ಎಂದು ಅವರು ಆಕ್ರೋಶ ಹೊರ ಹಾಕಿದರು.
ಚುನಾವಣೆ: ಕಾಂಗ್ರೆಸ್ ಮುಖಂಡರಿಂದ ಹಲ್ಲೆ
ಬೆಂಗಳೂರಿನ ಸರ್ಜಾಪುರ ನಿವಾಸಿ ಪ್ರಕಾಶ್ ಅವರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವನು ರೌಡಿ ಶೀಟರ್ ಆಗಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಅವರ ಮೇಲೂ ಹಲ್ಲೆಯಾಗಿದೆ. ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿರುವ ಪೊಲೀಸರ ನಡೆ ಖಂಡನೀಯ ಎಂದರು.
ಡಿಕೆಸು ಸೋಲಿನ ಕನಸು ಡಿಕೆಶಿಗೆ ಬಿದ್ದಿದೆ
ಡಿಕೆ ಸುರೇಶ್ ಸೋತಂತೆ ಸಹೋದರ ಡಿ.ಕೆ.ಶಿವಕುಮಾರ್ ಅವರಿಗೆ ಕನಸು ಬಿದ್ದಿದೆ. ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿ.ಕೆ.ಸುರೇಶ್ ಅವರನ್ನು ಹೇಗೆ ಎಂಎಲ್‌ಸಿ ಮಾಡಬೇಕೆಂದು ಅವರು ಚಿಂತನೆ ನಡೆಸಿದ್ದಾರೆ ಎಂದು ಲೇವಡಿ ಮಾಡಿದರು.
ಸೋಲಿನ ಭೀತಿ ಉಂಟಾಗಿರುವುದರಿಂದ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಮೈತ್ರಿಕೂಟದ ಬಹುತೇಕರು ಜೈಲಲ್ಲಿ, ಬೇಲ್ ನಲ್ಲಿ ಇದ್ದಾರೆ. ಫಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಬರಲು ಸಿಎಂ ಸಿದ್ದರಾಮಯ್ಯನವರೇ ಕಾರಣ. ಡಿ.ಕೆ.ಶಿವಕುಮಾರ್ ಸೋದರರನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರ ಕಾಲ ಮೇಲೆ ಚಪ್ಪಡಿ ಎಳೆದುಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಗಳನ್ನು ಹೇಗೆ ಮುಗಿಸಬೇಕೆಂದು ಗೊತ್ತಿದೆ ಎಂದರು.
14 ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗಿದ್ದು, 12 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಸಿಲಿದ್ದರೂ ಜನರು ಬಂದು ಮತದಾನ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications