ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್: ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಬಂಧನ
ಬೆಂಗಳೂರು, ಡಿಸೆಂಬರ್ 29: ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ ಹಿನ್ನೆಲೆಯಲ್ಲಿ ರಾಜಾಜಿನಗರದ ವೈದ್ಯಕೀಯ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ತನ್ನ ಮೇಲೆ ರ‍್ಯಾಗಿಂಗ್ ಮಾಡಿದ್ದಾರೆ ಎಂದು ಪ್ರಥಮ ವರ್ಷದ ವಿದ್ಯಾರ್ಥಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಆ ಐವರು ಆರೋಪಿಗಳ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಕರ್ನಾಟಕ ಶಿಕ್ಷಣಕಾಯ್ದೆ 1983ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆ ವೇಳೆ ವಿದ್ಯಾರ್ಥಿಗಳು ಮದ್ಯ ಸೇವನೆ ಮಾಡಿದ್ದರು ಎಂದ ತಿಳಿದುಬಂದಿದೆ. ಜೂನಿಯರ್ ಮೇಲೆ ರ‍್ಯಾಗಿಂಗ್ ಮಾಡಿದರೆ ಜಾಮೀನುರಹಿತ ಬಂಧನಕ್ಕೆ ಅವಕಾಶವಿದೆ. ಐವರು ವಿದ್ಯಾರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.












Click it and Unblock the Notifications