Double Decker Flyover: ಡಬಲ್ ಡೆಕ್ಕರ್ ಫ್ಲೈ ಓವರ್, ವಾಹನ ಸವಾರರಿಗೆ ಖುಷಿ ಸುದ್ದಿ

ಬೆಂಗಳೂರು, ಫೆಬ್ರವರಿ 26: ಬೆಂಗಳೂರು ನಗರದಲ್ಲಿ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ನಗರದ ಮತ್ತು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್‌ನ ನಿರ್ಮಾಣ ಮಾಡಲಾಗಿದೆ. ಫ್ಲೈ ಓವರ್‌ನ ಮೊದಲ ಹಂತದಲ್ಲಿ ವಾಹನಗಳು, 2ನೇ ಹಂತದಲ್ಲಿ ಆರ್. ವಿ. ರಸ್ತೆ-ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ 'ಹಳದಿ' ಮಾರ್ಗದ ಮೆಟ್ರೋ ರೈಲು ಸಂಚಾರವನ್ನು ನಡೆಸುತ್ತದೆ. ಈ ಡಬಲ್ ಡೆಕ್ಕರ್ ಫ್ಲೈ ಓವರ್ ಬಳಕೆ ಮಾಡುವ ವಾಹನ ಸವಾರರಿಗೆ ಪ್ರಮುಖವಾದ ಮಾಹಿತಿಯೊಂದಿದೆ.

2024ರ ಜುಲೈನಲ್ಲಿ ಬಿಎಂಆರ್‌ಸಿಎಲ್ ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್‌ ತನಕದ ಡಬಲ್ ಡೆಕ್ಕರ್ ಫ್ಲೈ ಓವರ್‌ನ ಒಂದು ಭಾಗವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದೆ. ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನಿಂದ ಈಗ ವಾಪಸ್ ಆಗುವ ಮಾರ್ಗ ವಾಹನ ಸಂಚಾರಕ್ಕೆ ಮುಕ್ತವಾಗುವ ಕುರಿತು ಮಾಹಿತಿ ಸಿಕ್ಕಿದೆ.

Ragigudda Silk Board Double Decker Flyover Set To Fully Open

ವಿವಿಧ ಕಾಮಗಾರಿಯ ಕಾರಣ ಡಬಲ್ ಡೆಕ್ಕರ್ ಫ್ಲೈ ಓವರ್‌ನ ಒಂದು ಭಾಗದಲ್ಲಿ ಮಾತ್ರ ವಾಹನ ಸಂಚಾರ ನಡೆಸುತ್ತಿದೆ. 2025ರ ಮಧ್ಯಭಾಗದಲ್ಲಿ ಫ್ಲೈ ಓವರ್‌ನ ಇನ್ನೊಂದು ಬದಿಯೂ ವಾಹನ ಸಂಚಾರಕ್ಕೆ ಮುಕ್ತವಾಗಲಿದ್ದು, ಈ ಮಾರ್ಗದ ವಾಹನ ಸವಾರರಿಗೆ ಅನುಕೂಲವಾಗಲಿದೆ.

ಎರಡು ರ‍್ಯಾಂಪ್‌ ನಿರ್ಮಾಣ: ಬಿಎಂಆರ್‌ಸಿಎಲ್ ಡಬಲ್ ಡೆಕ್ಕರ್ ಫ್ಲೈ ಓವರ್‌ನಲ್ಲಿ ಎರಡು ಪಿಲ್ಲರ್‌ಗಳನ್ನು ನಿರ್ಮಾಣ ಮಾಡಿದೆ. ಇದರಿಂದಾಗಿ ಹೆಚ್‌ಎಸ್‌ಆರ್‌ ಲೇಔಟ್ ಮತ್ತು ಬಿಟಿಎಂ ಲೇಔಟ್‌ಗೆ ಬರಲು ರ‍್ಯಾಂಪ್‌ ನಿರ್ಮಾಣ ಮಾಡಲು ಅನುಕೂಲವಾಗಲಿದೆ. ಈ ರ‍್ಯಾಂಪ್‌ ನಿರ್ಮಾಣ ಮುಗಿದ ಬಳಿಕ ಫ್ಲೈ ಓವರ್‌ನ ಮತ್ತೊಂದು ಬದಿಯೂ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.

ರ‍್ಯಾಂಪ್‌ ನಿರ್ಮಾಣಕ್ಕೆ ಇನ್ನೂ 3 ರಿಂದ 4 ಪಿಲ್ಲರ್ ನಿರ್ಮಿಸಬೇಕಿದೆ. ಜೂನ್ ಅಂತ್ಯ ಅಥವ ಜುಲೈನಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್‌ನ ಎರಡು ಬದಿಯೂ ವಾಹನ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಅಂದಾಜಿಸಿದ್ದಾರೆ.

19 ಕಿ. ಮೀ. ಆರ್. ವಿ. ರಸ್ತೆ-ಬೊಮ್ಮಸಂದ್ರ 'ಹಳದಿ' ನಮ್ಮ ಮೆಟ್ರೋ ರೈಲು ಯೋಜನೆಯ ಭಾಗವಾಗಿ ಈ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲಾಗಿದೆ. ಆದರೆ ಫ್ಲೈ ಓವರ್‌ನ ಮೇಲೆ ಇನ್ನೂ ನಮ್ಮ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿಲ್ಲ. ಈ ಮಾರ್ಗ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದ್ದು, 3 ಲಕ್ಷಕ್ಕೂ ಅಧಿಕ ಮಂದಿ ಮೆಟ್ರೋ ಮಾರ್ಗದಲ್ಲಿ ಪ್ರತಿನಿತ್ಯ ಸಂಚಾರ ನಡೆಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಡಬಲ್ ಡೆಕ್ಕರ್ ಫ್ಲೈ ಓವರ್‌ನ ಎರಡೂ ಬದಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರೆ ಸಿಲ್ಕ್ ಬೋರ್ಡ್ ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ. ಈಗ ಸಿಲ್ಕ್ ಬೋರ್ಡ್ ಜಂಕ್ಷನ್ ಸಿಗ್ನಲ್‌ನಲ್ಲಿ ಕಾಯುವ ಬದಲು ಹೆಚ್‌ಎಸ್ಆರ್ ಲೇಔಟ್, ಹೊಸೂರು ರಸ್ತೆ ಕಡೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ಮೂಲಕ ಸಾಗಬಹುದು.

ಡಬಲ್ ಡೆಕ್ಕರ್ ಫ್ಲೈ ಓವರ್‌ನ ಮತ್ತೊಂದು ಬದಿಯೂ ವಾಹನ ಸಂಚಾರ ಆರಂಭವಾದರೆ ಮಾರೇನಹಳ್ಳಿ ಬಳಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಸಂಚಾರಿ ಪೊಲೀಸರು ಆತಂಕಗೊಂಡಿದ್ದಾರೆ. ಇದರಿಂದಾಗಿ ಕನಕಪುರ ರಸ್ತೆ, ಜಯದೇವ ಆಸ್ಪತ್ರೆ ಕಡೆಗೆ ಹೆಚ್ಚಿನ ವಾಹನ ದಟ್ಟಣೆ ಉಂಟಾಗುವ ನಿರೀಕ್ಷೆ ಇದೆ.

ಸಂಚಾರಿ ಪೊಲೀಸರ ಪ್ರಕಾರ ಎರಡೂ ಬದಿಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಸಂಚಾರ ಆರಂಭವಾದಲ್ಲಿ ಸಿಲ್ಕ್ ಬೋರ್ಡ್‌ ಕಡೆ ವಾಹನ ದಟ್ಟಣೆ ಕಡಿಮೆ ಆಗಬಹುದು. ಆದರೆ ರಾಗಿಗುಡ್ಡ ಮೆಟ್ರೋ ನಿಲ್ದಾಣ, ಬನಶಂಕರಿ, ಕನಕಪುರ ರಸ್ತೆ ಕಡೆ ವಾಹನ ದಟ್ಟಣೆ ಹೆಚ್ಚಬಹುದು.

ಆರ್. ವಿ. ರಸ್ತೆ-ಬೊಮ್ಮಸಂದ್ರ ನಮ್ಮ ಮೆಟ್ರೋ ಮಾರ್ಗ ಕಾರ್ಯಾಚರಣೆ ಆರಂಭಿಸಿದರೆ ಖಾಸಗಿ ವಾಹನಗಳ ಬಳಕೆ ಕಡಿಮೆಯಾಗಲಿದೆ. ಆಗ ಸಿಲ್ಕ್ ಬೋರ್ಡ್‌ ಕಡೆ ವಾಹನ ದಟ್ಟಣೆ ಕಡಿಮೆಯಾಗಲಿದೆ. ನಗರದ ಅತಿ ಹೆಚ್ಚು ವಾಹನ ದಟ್ಟಣೆಯ ಮಾರ್ಗದಲ್ಲಿ ವಾಹನ ಸವಾರರಿಗೆ ಅನುಕೂಲವಾಗಲಿದೆ.

ಸದ್ಯಕ್ಕೆ ಆರ್. ವಿ. ರಸ್ತೆ-ಬೊಮ್ಮಸಂದ್ರ ನಡುವಿನ ರೈಲು ಮಾರ್ಗ ಕಾಮಗಾರಿ ಮುಗಿದಿದ್ದು, ರೈಲು ಪ್ರಾಯೋಗಿಕ ಸಂಚಾರ ನಡೆಸುತ್ತಿದೆ. ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ಸಿಕ್ಕರೂ ಸಹ ತಕ್ಷಣ ರೈಲು ಸಂಚಾರ ಆರಂಭಿಸಲು ರೈಲುಗಳು ಕೊರತೆ ಇದೆ. ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+