ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಗಿಣಿ

|
Google Oneindia Kannada News

ಬೆಂಗಳೂರು, ನವೆಂಬರ್ 29 : ಡ್ರಗ್ಸ್ ಜಾಲದ ಕುರಿತ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿಯೂ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ತಮ್ಮ ಜಾಮೀನು ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ವಕೀಲರು ವಿಶೇಷ ಮೇಲ್ಮನವಿ ಅರ್ಜಿಯನ್ನು (ಎಸ್‌ಎಲ್‌ಪಿ) ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ.

ಎನ್‌ಡಿಪಿಎಸ್‌ ಕೋರ್ಟ್‌ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ ಎನ್‌ಡಿಪಿಎಸ್‌ ಕೋರ್ಟ್‌ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ

ನವೆಂಬರ್ 3ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. 30 ವರ್ಷದ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 4ರಂದು ಬೆಂಗಳೂರಿನಲ್ಲಿ ಬಂಧಿಸಿದ್ದರು.

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು? ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು?

Ragini Dwivedi Moves Supreme Court For Bail

ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ, ರೇವ್ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದ ಆರೋಪ ಅವರ ಮೇಲಿದೆ.

ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ ದ್ವಿವೇದಿ

ಬೆಂಗಳೂರಿನ ಎನ್‌ಡಿಪಿಎಸ್ ವಿಶೇಷ ಕೋರ್ಟ್ ನಟಿಯರಾದ ಸಂಜನಾ ಮತ್ತು ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ರಾಗಿಣಿ ಜಾಮೀನು ನೀಡುವಂತೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಸಹ ಜಾಮೀನು ನೀಡಲು ನಿರಾಕರಿಸಿತ್ತು.

ಜಾಮೀನು ಅರ್ಜಿಗಳು ವಜಾಗೊಂಡ ಕಾರಣ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ರಾಗಿಣಿ ದ್ವಿವೇದಿ ಕುಟುಂಬದವರು ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದರು. ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.

ಸೆಪ್ಟೆಂಬರ್ 4ರಂದು ನಟಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಬಳಿಕ ಅವರನ್ನು ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಕರೆದುಕೊಂಡು ಬರಲಾಗಿತ್ತು. ವಿಚಾರಣೆ ಬಳಿಕ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ನಟಿ ರಾಗಿಣಿ ಆಪ್ತರಾದ ರವಿಶಂಕರ್‌ನನ್ನು ಡ್ರಗ್ಸ್ ಪ್ರಕರಣದಲ್ಲಿ ಮೊದಲು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತನಕ ವಿಚಾರಣೆ ಬಳಿಕ ರಾಗಿಣಿ ನಿವಾಸದ ಮೇಲೆ ದಾಳಿ ಮಾಡಲಾಗಿತ್ತು. ಸೆಪ್ಟೆಂಬರ್‌ನಿಂದ ರಾಗಿಣಿ ಜೈಲಿನಲ್ಲಿಯೇ ಇದ್ದಾರೆ.

ಇಡಿ ಸಹ ವಿಚಾರಣೆ; ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಸಹ ನಡೆಸಿದೆ. ಅಕ್ರಮ ಹಣ ವರ್ಗಾವಣೆ, ಆಸ್ತಿ ಖರೀದಿ ಆರೋಪದ ಕುರಿತು ಇಡಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

English summary
Ragini Dwivedi field special leave petition (SLP) in Supreme Court challenging Karnataka high court order that rejected her bail petition. Ragini Dwivedi arrested by the CCB police in drugs case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X