Bengaluru Traffic: ರಾಹುಲ್ ದ್ರಾವಿಡ್ ಕಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ; ರಸ್ತೆಯಲ್ಲೇ ವಾಗ್ವಾದ
ಕ್ರಿಕೆಟ್ ಲೋಕದ ಜೆಂಟಲ್ ಮ್ಯಾನ್ ಎಂದೇ ಹೆಸರಾಗಿರುವ ರಾಹುಲ್ ದ್ರಾವಿಡ್ ಅವರಿಗೂ ಬೆಂಗಳೂರು ಟ್ರಾಫಿಕ್ ಕಿರಿಕಿರಿ ಪರಿಚವಾಗಿದೆ. ಮಂಗಳವಾರ ಅವರ ಚಲಾಯಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದ್ದು ಗೂಡ್ಸ್ ಆಟೋ ಡ್ರೈವರ್ ದ್ರಾವಿಡ್ ಅವರ ಜೊತೆಯೇ ವಾಗ್ವಾದಕ್ಕೆ ಇಳಿದಿದ್ದಾನೆ. ಈ ವಿಡಿಯೋ ಇದೀಗ ಸದ್ಯ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.
ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃದು ಭಾಷಿಯಾಗಿರುವ ರಾಹುಲ್ ದ್ರಾವಿಡ್ ಅವರಿಗೂ ಕಿರಿ ಕಿರಿ ಮಾಡುವಂತ ಸನ್ನಿವೇಶ ಸೃಷ್ಟಿಯಾಗಿತ್ತು. ದ್ರಾವಿಡ್ ತಮ್ಮ ಕಾರಿನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಕಡೆಯಿಂದ ಹೈಗ್ರೌಂಡ್ ಕಡೆ ಹೋಗುವ ಸಂದರ್ಭದಲ್ಲಿ ಟ್ರಾಫಿಕ್ ಸಿಗ್ನ್‌ಲ್‌ನಲ್ಲಿ ನಿಂತಿದ್ದಾಗ ಹಿಂದಿನಿಂದ ಬಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ.

ಗೂಡ್ಸ್ ಆಟೋ ತಮ್ಮ ಕಾರಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಕೆಳಗಿಳಿದ ರಾಹುಲ್ ದ್ರಾವಿಡ್ ಚಾಲಕನ ನಂಬರ್ ಪಡೆದುಕೊಂಡು ಹೋಗಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸದ್ಯ ಆಟೋ ಚಾಲಕನ ಮೇಲೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
Rahul Dravid’s Car touches a goods auto on Cunningham Road Bengaluru #RahulDravid #Bangalore pic.twitter.com/AH7eA1nc4g
— Spandan Kaniyar ಸ್ಪಂದನ್ ಕಣಿಯಾರ್ (@kaniyar_spandan) February 4, 2025
ಆದರೆ ರಾಹುಲ್ ದ್ರಾವಿಡ್ ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆಯುತ್ತಿರುವುದನ್ನು ಯಾರೋ ಚಿತ್ರೀಕರಣ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ರಾಹುಲ್ ದ್ರಾವಿಡ್ ಅವರಿಗೂ ಬೆಂಗಳೂರು ರೋಡ್ 'ಕಿರಿಕ್' ಅನುಭವ ಆಗಿದೆ ಎಂದಿದ್ದಾರೆ.











Click it and Unblock the Notifications