ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ
Recommended Video

ರಾಹುಲ್ ಗಾಂಧಿ ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ | Oneindia Kannada
ಬೆಂಗಳೂರು, ಮಾರ್ಚ್ 20: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದದಲ್ಲಿ ಭರ್ಜರಿ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಮೂರನೇ ಪ್ರಚಾರ ಕಾರ್ಯವನ್ನು ಇಂದಿನಿಂದ ಎರಡನು ದಿನಗಳ ಕಾಲ ನಡೆಸಲಿದ್ದಾರೆ.
ಎರಡು ದಿನಗಳ ತಮ್ಮ ಪ್ರವಾಸದಲ್ಲಿ ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿರುವ ಅವರು, ನಂತರ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

In Pics : ರಾಹುಲ್ ಗಾಂಧಿ ಸ್ವಾಗತಕ್ಕೆ ಸಿಂಗಾರಗೊಂಡ ಮಂಗಳೂರು
ಇಂದು(ಮಾ.20) ಬೆಳಿಗ್ಗೆ 11:30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಇಂದು ಇಡೀ ದಿನ ಕರಾವಳಿ ಭಾಗದ ವಿವಿಧ ದೇವಾಲಯ, ಚರ್ಚ್ ಮತ್ತು ದರ್ಗಾಗಳಿಗೆ ಭೇಟಿ ನೀಡಲಿದ್ದಾರೆ. ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications