ಡಾ.ರಾಜ್ ನಿವಾಸಕ್ಕಿಂದು ರಾಹುಲ್ ಗಾಂಧಿ ಭೇಟಿ

ಸೋಮವಾರ (ಜೂನ್ 12) ರಂದು ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ರಾಜ್ಯದ ಹಲವಾರು ನಾಯಕರ ಜತೆಗೆ ಮಾತುಕತೆ. ಆನಂತರ, ಸದಾಶಿವ ನಗರದಲ್ಲಿರುವ ಡಾ. ರಾಜ್ ಕುಮಾರ್ ಮನೆಗೆ ಭೇಟಿ. ಇತ್ತೀಚೆಗೆ ಪಾರ್ವತಮ್ಮ ರಾಜ್ ಕುಮಾರ್ ನಿ

ಬೆಂಗಳೂರು, ಜೂನ್ 12: ಕರ್ನಾಟಕ ಬಂದ್ ಗಲಾಟೆಗಳು ನಡೆಯುತ್ತಿರುವ ಈ ದಿನವೇ (ಜೂನ್ 12) ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿದ್ದು, ಸಂಜೆ ಹೊತ್ತಿಗೆ ನಗರದಲ್ಲಿರುವ ಡಾ. ರಾಜ್ ಕುಮಾರ್ ನಿವಾಸಕ್ಕೆ ತೆರಳಲಿದ್ದಾರೆ.

ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದ ಕನ್ನಡ ಚಿತ್ರರಂಗ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುವ ಉದ್ದೇಶದಿಂದ ಬೆಂಗಳೂರಿಗೆ ಆಗಮಿಸಿರುವ ರಾಹುಲ್ ಗಾಂಧಿ, ಕೆಲವಾರು ಸಭೆಗಳನ್ನು ನಡೆಸಲಿದ್ದಾರೆ.

Rahul Gandhi visits Dr. Rajkumar's house in Bengaluru

ಆನಂತರ ಅವರು, ಸದಾಶಿವ ನಗರದಲ್ಲಿರುವ ವರನಟ ಡಾ. ರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಲಿದ್ದಾರೆ. ಇತ್ತೀಚೆಗೆ, ಡಾ. ರಾಜ್ ಕುಮಾರ್ ಅವರ ಪತ್ನಿ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಲು ರಾಹುಲ್ ಗಾಂಧಿ ತೆರಳಲಿದ್ದಾರೆಂದು ಹೇಳಲಾಗಿದೆ.

ಮಿಸಸ್ ರಾಮಾಚಾರಿ ರಾಧಿಕಾ ಪಂಡಿತ್ ಇದೇ ವಿಷಯಕ್ಕೆ ಈಗ ಸದ್ದು ಮಾಡುತ್ತಿದ್ದಾರೆ

ಈ ಸಂದರ್ಭದಲ್ಲಿ, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಹಾಜರಿದ್ದು ರಾಹುಲ್ ಗಾಂಧಿಯವರನ್ನು ಸ್ವಾಗತಿಸುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+