Get Updates
Get notified of breaking news, exclusive insights, and must-see stories!

"ಬಿಹಾರ ಚುನಾವಣೆ ಬಗ್ಗೆ ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ ಪಕ್ಕಾ''

ಬೆಂಗಳೂರು, ನವೆಂಬರ್ 12: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ನಾಯಕರ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಕ್ಕೆ ಮೊದಲೇ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಒಂದು ಕಡೆ ಲೋಕಸಭೆಯಲ್ಲೂ ಅವರು ಕೆಲಸ ಮಾಡುತ್ತಿಲ್ಲ, ಮತ್ತೊಂದು ಕಡೆ ಪಕ್ಷಕ್ಕಾಗಿಯೂ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.

Rahul Gandhi will Alleges Vote Loot in Bihar Election over Exit Poll Survey For NDA R ashok

ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆ ಆಗಿದೆ. ಬಿಹಾರದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲವೆಂದು ಹೇಳಲಾಗಿದೆ ಎಂದರು.

ಜೈಲಿನ ವಿಡಿಯೋ: ತನಿಖೆಯ ಹಾದಿ ತಪ್ಪಿದೆ?

ದೆಹಲಿಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್‌ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ. ಮೊಬೈಲ್‌ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ? ಎಂದು ತನಿಖೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃಧುವಾದ ಧೋರಣೆ ಒಳ್ಳೆಯದಲ್ಲ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ದೆಹಲಿಯನ್ನು ನೋಡಬೇಕಿಲ್ಲ. ಇಂದಿನ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಗೃಹ ಸಚಿವರಾಗಿದ್ದಾಗ ದಲಿತರನ್ನು ಸುಟ್ಟು ಹಾಕಲಾಗಿತ್ತು. ಆ ಪ್ರಕರಣದಲ್ಲಿ ಖರ್ಗೆಯವರ ವಿಫಲತೆಯನ್ನು ಇವರು ಮೊದಲು ನೋಡಲಿ. ಅಮಿತ್‌ ಶಾ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇಲ್ಲ ಎಂದು ತಿರುಗೇಟು ಕೊಟ್ಟರು. ರಾಜ್ಯ ಸರ್ಕಾರ ಸದ್ಯ ಪಾಪರ್ ಆಗಿದೆ. ನೌಕರರಿಗೆ, ಸಿಬ್ಬಂದಿಗೆ ವೇತನ ಕೊಡಲಾಗದೇ ಹೆಣಗಾಡುತ್ತಿದೆ ಎಂದು ಆರೋಪಿಸಿದರು.

ಜೋಳ ಖರೀದಿ ಕೇಂದ್ರ ಆರಂಭಕ್ಕೆ ಆಗ್ರಹ

ರಾಜ್ಯಾದ್ಯಂತ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ನೀಡಿ ಖರೀದಿಸಲು ರೈತರು ಬೇಡಿಕೆ ಇಟ್ಟಿದ್ದಾರೆ. ಆದರೆ ರೈತ ವಿರೋಧಿ ಸರ್ಕಾರ ಒಂದೇ ಒಂದು ಖರೀದಿ ಕೇಂದ್ರ ತೆರೆದಿಲ್ಲ. ಕಾಲಾಹರಣ ಮಾಡದೆ ಕೂಡಲೇ ಖರೀದಿ ಆರಂಭಿಸಬೇಕು, ಇಲ್ಲದಿದ್ದರೆ ಪರಿಸ್ಥಿತಿ ಸರಿ ಇರಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಈರುಳ್ಳಿ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುತ್ತಿರುವ ದರ ಕಳೆ ಕೀಳಿಸಿದ ಕೂಲಿಯ ಹಣ ಗಿಟ್ಟುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ನೆರವಿಗೆ ಧಾವಿಸಿ ಈರುಳ್ಳಿ ಖರೀದಿಸಲು ಕ್ರಮ ಕೈಗೊಳ್ಳಬೇಕಿದ್ದ ಸರ್ಕಾರ ಮೀನಾ ಮೇಷ ಎಣಿಸುತ್ತಿದೆ. ಮಾತಿಗೊಮ್ಮೆ ತಮ್ಮದು ರೈತ ಪರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುತ್ತಾರೆ, ಇದೇನಾ ರೈತರ ಪರವಾದ ಕಾಳಜಿ ಎಂದು ವ್ಯಗ್ಯವಾಡಿದರು. ನೆನ್ನೆಯಷ್ಟೇ ಜೋಳ ಖರೀದಿ ಕೇಂದ್ರ ಸರ್ಕಾರ ಕೂಡಲೇ ಆರಂಭಿಸುವಂಥೆ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+