ನವೆಂಬರ್ 25ರಂದು ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ
ಬೆಂಗಳೂರು, ನವೆಂಬರ್ 23 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನವೆಂಬರ್ 25ರಂದು ಉದ್ಯಾನ ನಗರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಅವರು, ಅಂದು ಸಂಜೆ ದೆಹಲಿಗೆ ವಾಪಸ್ ಆಗಲಿದ್ದಾರೆ.
ಯುವಜನತೆಯನ್ನು ರಾಜಕೀಯದತ್ತ ಆಕರ್ಷಿಸುವ ತಮ್ಮ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬೇರೆ ಯಾವುದೇ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿಲ್ಲ. [ಮಂಡ್ಯದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?]

ನವೆಂಬರ್ 25ರ ಬುಧವಾರ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು ಮೌಂಟ್ ಕಾರ್ಮೆಲ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. [ಚಿತ್ರಗಳು : ರಾಹುಲ್ ಕರ್ನಾಟಕ ಭೇಟಿ]
ಅಂದಹಾಗೆ, ರಾಹುಲ್ ಗಾಂಧಿ ಅವರು ಅಕ್ಟೋಬರ್ 9 ಮತ್ತು 10ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಮಂಡ್ಯ, ಹಾವೇರಿಗೆ ಭೇಟಿ ನೀಡಿದ್ದರು. ಬೆಂಗಳೂರಿನಲ್ಲಿಯೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. [ಹಾವೇರಿ ರೈತ ಸಮಾವೇಶದಲ್ಲಿ ರಾಹುಲ್ ಹೇಳಿದ್ದೇನು?]
ಮಂಡ್ಯ, ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಹಾವೇರಿಯಲ್ಲಿ ಪಾದಯಾತ್ರೆ ನಡೆಸಿ, ಬಹೃತ್ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.












Click it and Unblock the Notifications