Bengaluru Traffic Advisory: ರೈಲ್ವೆ ಬ್ರಿಡ್ಜ್ ಕಾಮಗಾರಿ, 90 ದಿನ ಈ ರಸ್ತೆಯಲ್ಲಿ ವಾಹನಗಳಿಗೆ ನಿರ್ಬಂಧ
ಬೆಂಗಳೂರು, ಜೂನ್ 16: ಬೆಂಗಳೂರಿನಾದ್ಯಂತ ಒಂದಲ್ಲ ಒಂದು ಕಡೆ ಕಾಮಗಾರಿ, ಮೆಟ್ರೋ ಯೋಜನೆ ಇತರ ಕೆಲಸಗಳು ನಡೆಯುತ್ತಲೇ ಇರುತ್ತವೆ. ಇದರಿಂದ ನಿತ್ಯ ಓಡಾಡುವ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಇದೀಗ ಅಂಥದ್ದೇ ಒಂದು ಸುದ್ದಿಯನ್ನು ಬೆಂಗಳೂರು ಸಂಚಾರಿ ಪೊಲೀಸರು ನೀಡಿದ್ದಾರೆ. ರೈಲು ಇಲಾಖೆ ವತಿಯಿಂದ ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಮೂರು ತಿಂಗಳ ಕಾಲ ಸಂಚಾರ ಸಲಹೆ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ-ಕಸ್ತೂರಿನಗರ ಕಡೆ ಹೋಗುವ ರೈಲ್ವೇ ಪ್ಯಾರಲಾಲ್ ರಸ್ತೆಯಲ್ಲಿ ರೈಲು ಇಲಾಖೆ ವತಿಯಿಂದ ಸೇತುವೆ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯು ಬರೋಬ್ಬರಿ 90 ದಿನಗಳ ಕಾಲ ಮುಂದುವರಿಯಲಿದೆ ಎಂದು ಬೆಂಗಳೂರು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ ಅವರು ಮಾಹಿತಿ ನೀಡಿದ್ದಾರೆ.

ಒಟ್ಟು ಮೂರು ತಿಂಗಳ ಕಾಮಗಾರಿ ಮೊನ್ನೆ ಜೂನ್ 14ರಿಂದ ಆರಂಭವಾಗಲಿದೆ. ಆದ್ದರಿಂದ ರೈಲ್ವೆ ಬ್ರಿಡ್ಜ್ ನಿರ್ಮಾಣ ಕಾರ್ಯ ಆಗುವವರೆಗೂ ಸಾರ್ವಜನಿಕರು ಮತ್ತು ವಾಹನ ಸವಾರರು ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ. ನಿರ್ಬಂಧಿತ ಸಂಚಾರ ರಸ್ತೆಗಳು, ಪರ್ಯಾಯ ಮಾರ್ಗ ತಿಳಿಯಿರಿ.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/dooU4OAgJb
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) June 13, 2025
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು
* ಬೆನ್ನಿಗಾನಹಳ್ಳಿ (ಸದಾನಂದನಗರ ಬ್ರಿಡ್ಜ್) ಕಡೆಯಿಂದ ಹಳೆ ಮದ್ರಾಸ್ ರಸ್ತೆಗೆ ಸೇರುವ ಕೋಕೊ ಕೋಲ ಗೋಡಾನ್ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ
* ಹಳೇ ಮದ್ರಾಸ್ ರಸ್ತೆ ಬೆನ್ನಿಗಾನಹಳ್ಳಿ ಬ್ರಿಡ್ಜ್ ಕಡೆಯಿಂದ ಕಸ್ತೂರಿನಗರ ಕಡೆಗೆ ಹೋಗುವ ವಾಹನ ಸವಾರರು ಬೈಪಾಸ್ ಹೆಬ್ಬಾಳ 10 ರಸ್ತೆಯ ಮೂಲಕ ಕಸ್ತೂರಿನಗರದ ಕಡೆಗೆ ಸಂಚರಿಸಬಹುದು.
* ಕಸ್ತೂರಿನಗರ ಕಡೆಯಿಂದ ಹಳೇ ಮದ್ರಾಸ್ ರಸ್ತೆ ಕಡೆಗೆ ಹೋಗುವ ವಾಹನ ಸವಾರರು ಸದಾನಂದನಗರ ಕಡೆಯಿಂದ ಎನ್.ಜಿ.ಐ.ಎಫ್ ಸಿಗ್ನಲ್ ಮೂಲಕ ಹಳೆ ಮದ್ರಾಸ್ ರಸ್ತೆ ಕಡೆಗೆ ಪ್ರಯಾಣಿಸಬಹುದು ಎಂದು ಪ್ರಕಟಣೆಯಲ್ಲಿ ಬೆಂಗಳೂರು ಸಂಚಾರಿ ಪೊರ್ವ ಪೊಲೀಸರು ಮಾಹಿತಿ ನೀಡಿದ್ದಾರೆ. ಸಹಕರಿಸುವಂತೆ ವಾಹನ ಸವಾರರಿಗೆ, ಸಾರ್ವಜನಿಕರಿಗೆ ಕೋರಿದ್ದಾರೆ.












Click it and Unblock the Notifications