ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು, ಡಿಸೆಂಬರ್ 18 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. 2020ರ ಜನವರಿಯಿಂದ ವಿಮಾನ ನಿಲ್ದಾಣದ ಪ್ರಯಾಣಿಕರು ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ.

ಹೌದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಮಾರು 6 ಕಿ. ಮೀ. ದೂರದಲ್ಲಿರುವ ರೈಲ್ವೆ ನಿಲ್ದಾಣ ಜನವರಿಯಲ್ಲಿ ಲೋಕಾರ್ಪಣೆಗೊಳ್ಳಿದೆ. ರೈಲು ನಿಲುಗಡೆ ಆರಂಭವಾಗಲಿದ್ದು, ವಿಮಾನ ನಿಲ್ದಾಣಕ್ಕೆ ಸಂಪರ್ಕ ಸಾಧ್ಯವಾಗಲಿದೆ.

ಟ್ರಂಪೆಟ್ ಫ್ಲೈ ಓವರ್ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲು ನಿಲ್ದಾಣದ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಿಐಎಎಲ್ 1.5 ಕೋಟಿ ರೂ. ವೆಚ್ಚದಲ್ಲಿ ರೈಲು ನಿಲ್ದಾಣವನ್ನು ನಿರ್ಮಿಸುತ್ತಿದೆ. ಜನವರಿಯಿಂದ ರೈಲುಗಳು ಇಲ್ಲಿ ನಿಲುಗಡೆಗೊಳ್ಳಲಿವೆ.

Railway Station Near Trumpet Flyover To Open In January

ದೊಡ್ಡಜಾಲ-ದೇವನಹಳ್ಳಿ ಮಾರ್ಗ ಮಧ್ಯದಲ್ಲಿರುವ ಟ್ರಂಪೆಟ್ ಫ್ಲೈ ಓವರ್ ಬಳಿ ರೈಲು ನಿಲ್ದಾಣವಿದೆ. ಇದರಿಂದ ವಿಮಾನ ನಿಲ್ದಾಣ ಸುಮಾರು 6 ಕಿ. ಮೀ. ದೂರದಲ್ಲಿದೆ. ಈ ರೈಲು ನಿಲ್ದಾಣದಲ್ಲಿ 2 ರಿಂದ 5 ನಿಮಿಷಗಳ ತನಕ ನಿಲುಗಡೆಗೊಳ್ಳಲಿದೆ.

ಬೆಂಗಳೂರು-ಕೋಲಾರ, ಯಶವಂತಪುರ-ದೇವನಹಳ್ಳಿ, ಚನ್ನಪಟ್ಟಣ-ಕೋಲಾರ ರೈಲುಗಳು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಿದ್ದು, ರೈಲುಗಳು ಹೊಸ ರೈಲು ನಿಲ್ದಾಣದಲ್ಲಿ ನಿಲ್ಲುವುದರಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಮಾರ್ಗದಲ್ಲಿ ರೈಲುಗಳ ಸಂಚಾರವನ್ನು ಹೆಚ್ಚಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ. ಇದಕ್ಕಾಗಿ ಯಲಹಂಕದಿಂದ ದೇವನಹಳ್ಳಿ ತನಕ 23 ಕಿ. ಮೀ. ಮಾರ್ಗವನ್ನು ವಿದ್ಯುದೀಕರಣ ಮಾಡಲು ಯೋಜನೆ ರೂಪಿಸುತ್ತಿದೆ.

ಟ್ಯಾಕ್ಸಿ, ಬಸ್ ವ್ಯವಸ್ಥೆ: ಟ್ರಂಪೆಟ್ ಫ್ಲೈ ಓವರ್ ಬಳಿಯ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣ ಸಂಪರ್ಕಿಸಲು ಟ್ಯಾಕ್ಸಿ ಅಥವ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಬಿಎಂಟಿಸಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+