ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ರೈಲ್ವೆಯ ಕೊಡುಗೆ; ಕೇಂದ್ರ ಸಚಿವರ ಟ್ವೀಟ್

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರು ಶೀಘ್ರದಲ್ಲಿಯೇ ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ. ಇದು ಪ್ರಯಾಣಿಕರಿಗೆ ರೈಲ್ವೆಯ ಕೊಡುಗೆ ಎಂದು ಕೇಂದ್ರ ರೈಲ್ವೆ ಸಚಿವರು ಟ್ವೀಟ್ ಮಾಡಿದ್ದಾರೆ.

Recommended Video

Israel ಒಪ್ಪಂದದ ಬಗ್ಗೆ UAE ಮೇಲೆ ದಾಳಿ ಮಾಡುವುದಾಗಿ Iran ಬೆದರಿಕೆ ಹಾಕಿದೆ | Oneindia Kannada

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ರೈಲು ನಿಲ್ದಾಣದ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಆಗಸ್ಟ್ ಅಂತ್ಯದೊಳಗೆ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದಾಗಿ ವಿಮಾನ ನಿಲ್ದಾಣಕ್ಕೆ ಇನ್ನು ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ.

ಕೆಐಎಎಲ್ ರೈಲು ನಿಲ್ದಾಣ ಸಿದ್ಧ; ರೈಲು ಸಂಚಾರ ಯಾವಾಗ? ಕೆಐಎಎಲ್ ರೈಲು ನಿಲ್ದಾಣ ಸಿದ್ಧ; ರೈಲು ಸಂಚಾರ ಯಾವಾಗ?

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಘೋಯಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಇದು ರೈಲ್ವೆಯ ಕೊಡುಗೆ ಎಂದು ಹೇಳಿದ್ದಾರೆ. ನಿಲ್ದಾಣ ಕಾಮಗಾರಿಯ ವಿಡಿಯೋ ಸಹ ಟ್ವೀಟ್‌ನಲ್ಲಿದೆ.

ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಹೋಗಲು 30 ರೂ. ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಹೋಗಲು 30 ರೂ.

Railways Gift To Bengaluru Flyers Tweeted Piyush Goyal

"ಜನರ ದಶಕಗಳ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ರೈಲು ನಿಲ್ದಾಣ ಬರುತ್ತಿದೆ" ಎಂದು ಕೇಂದ್ರ ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್ ಕೇರಳ ವಿಮಾನ ದುರಂತ; ಡಿಸಿ ಸೇರಿ 600 ಜನರಿಗೆ ಕ್ವಾರಂಟೈನ್

"ಈ ನಿಲ್ದಾಣದಿಂದಾಗಿ ರಸ್ತೆ ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರಿಗೆ ಬಿಡುಗಡೆ ಸಿಗಲಿದೆ. ಜನರು ಸುಲಭವಾಗಿ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸಬಹುದಾಗಿದೆ" ಎಂದು ಪಿಯೂಷ್ ಘೋಯಲ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸಚಿವರ ಟ್ವೀಟ್

English summary
Railway minister Piyush Goyal tweeted that fulfilling decade old demand of people. A halt railway station is coming up near Kempegowda International Airport, Bengaluru. It is railway's gift to Bengaluru flyers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X