ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಸಾನಿ ಚಂಡಮಾರುತ: ಭಾನುವಾರ ಮಧ್ಯಾಹ್ನದಿಂದಲೇ ಎಫೆಕ್ಟ್

|
Google Oneindia Kannada News

ಬೆಂಗಳೂರು, ಮೇ 8: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತ ಆಗಿ ಪರಿವರ್ತನೆ ಆಗಲಿದ್ದು, ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತಷ್ಟು ಚುರುಕು ಪಡೆದುಕೊಳ್ಳಲಿದೆ. ಭಾನುವಾರ ಮಧ್ಯಾಹ್ನದಿಂದಲೇ ಸೈಕ್ಲೋನ್ ಪರಿಣಾಮ ರಾಜ್ಯದಲ್ಲಿ ಕಾಣಸಲಿದೆ. ಚಂಡಮಾರುತಕ್ಕೆ 'ಅಸಾನಿ' ಎಂದು ಹೆಸರಿಸಲಾಗಿದೆ.

ಹವಾಮಾನ ಇಲಾಖೆಯ ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ಒಡಿಶಾದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ. ಚಂಡಮಾರುತದ ವೇಗ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಡಗು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.

Rain alert: Cyclone Asani farms Sunday afternoon

ಸಂಭಾವ್ಯ ಚಂಡಮಾರುತಕ್ಕೆ ಅಸಾನಿ ಎಂದು ಹೆಸರಿಡಲಾಗಿದೆ. ಶ್ರೀಲಂಕಾ ಚಂಡಮಾರುತಕ್ಕೆ ಹೆಸರಿಟ್ಟಿದ್ದು, ಸಿಂಹಳಿ ಭಾಷೆಯಲ್ಲಿ ಅಸಾನಿ ಎಂದ್ರೆ ಕ್ರೋಧ ಎಂದರ್ಥ. ಆರಂಭದಲ್ಲಿ ಅಸಾನಿ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಅಸಾನಿಯ ಅಬ್ಬರ ಸ್ವಲ್ಪ ತಗ್ಗಿದೆ. ಮಾರುತಗಳು ಓಡಿಶಾದತ್ತ ಚಲಿಸುತ್ತಿದ್ದು, ಮೇ 9 ಮತ್ತು 10 ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ. ಗಾಳಿಯ ವೇಳೆ ಗಂಟೆಗೆ 80 ರಿಂದ 90 ಕಿಲೋ ಮೀಟರ್ ಇರಲಿದೆ ಎಂದು ಅಂದಾಜಿಸಲಾಗಿದೆ. ಮೇ 10ರ ನಂತರ ಗಾಳಿಯ ವೇಗ ಕಡಿಮೆಯಾಗಲಿದೆ.

ಇಂದು-ನಾಳೆ ಓಡಿಶಾದ 17 ಜಿಲ್ಲೆಗಳಲ್ಲಿ ಹೈ ಅಲರ್ಟ್:

ಮೇ 9 ಮತ್ತು ಮೇ 10ರಂದು ಆಂಧ್ರ ಮತ್ತು ಓಡಿಶಾದ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಓಡಿಶಾದ 17 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Rain alert: Cyclone Asani farms Sunday afternoon

ಇನ್ನೂ ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದೆ. ಗುಡುಗು-ಸಿಡಿಲು ಸಹಿತ ಮಳೆಯಾಗುತ್ತಿದ್ದು, ಪ್ರಾಣ ಹಾನಿ ಸಂಭವಿಸುತ್ತಿವೆ. ಮಧ್ಯಾಹ್ನದ ನಂತರ ಶುರುವಾಗುವ ಮಳೆ ಜನರನ್ನು ಹೈರಾಣಾಗಿಸಿದೆ.

Rain alert: Cyclone Asani farms Sunday afternoon

ಎಲ್ಲೆಲ್ಲಿ ಮಳೆಯಾಗಿದೆ?

ರಾಜಧಾನಿ ಬೆಂಗಳೂರಿನಲ್ಲಿಯೂ ಸಂಜೆ ಮಳೆಯಾಗಿದೆ. ರಾಜಾಜಿನಗರ, ಯಶವಂತಪುರ, ಜಾಲಹಳ್ಳಿ ಕ್ರಾಸ್‌, ಮೆಜೆಸ್ಟಿಕ್ ಸುತ್ತಮುತ್ತ ಮಳೆಯಾಗಿದೆ. ಬಿಸಿಲಿಗೆ ಉತ್ತರ ಭಾರತ ತತ್ತರಿಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ.

Recommended Video

Chahal ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆಡಿದ್ದು ಹೀಗೆ | Oneindia Kannada

English summary
Cyclone Asani farms: Cyclone Effect in Karnataka Sunday afternoon,The meteorological department has warned fishermen not to land at sea.Yellow Alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X