ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ: ಇದಕ್ಕಿಲ್ಲವೇ ಶಾಶ್ವತ ಪರಿಹಾರ
ಬೆಂಗಳೂರು, ಮೇ5: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಕಾಣಿಸಿಕೊಂಡಿದೆ. ಕೆರೆ ಪೂರ್ತಿ ನೊರೆ ತುಂಬಿಕೊಂಡಿದ್ದು, ಮತ್ತೊಂದು ಮಳೆ ಬಂದರೆ ನೊರೆಯ ಬುಗ್ಗೆಗಳು ರಸ್ತೆಗೆ ಹಾರುವ ಆತಂಕ ಶುರುವಾಗಿದೆ.
ಕೆರೆಯಲ್ಲಿ ನೊರೆ ಹೆಚ್ಚಿದಷ್ಟೂ ಸಮಸ್ಯೆಗಳು ಉಲ್ಬಣಿಸುತ್ತವೆ. ಯಮಲೂರು ಕೋಡಿ ಬಳಿಯಲ್ಲಿ ಹೆಚ್ಚು ಪ್ರಮಾಣದ ನೊರೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ. ರಾಜಕೀಯ ಪಕ್ಷಗಳ ನಾಯಕರು ಈಗ ಮತ ಕೇಳಲು ಬರುತ್ತಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಯಾವುದೇ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಮಾಡಿಲ್ಲ. ಅನೇಕ ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವೆಗಿಲ್ಲ.

ನ್ಯಾಯಾಲಯ ಮಧ್ಯ ಪ್ರವೇಶಿಸಿದಾಗ ತೋರಿಕೆಗೆ ಕೆಲವು ಕ್ರಮಗಳನ್ನು ಕೈಗೊಂಡಿದ್ದು ಬಿಟ್ಟರೆ ಅಕ್ಷರಶಃ ನರಕದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದ್ದಾರೆ.
ಇದುವರೆಗೆ ಹಲವಾರು ಬಾರಿ ಬೆಂಕಿ, ನೊರೆ ಕಾಣಿಸಿಕೊಂಡರು, ಆ ಸಂದರ್ಭದಲ್ಲಿ ಅದನ್ನು ಆರಿಸುವ ಕೆಲಸ ಮಾಡಿದ್ದಾರೆ ವಿನಃ ಅದಕ್ಕೆ ಶಾಶ್ವತ ಪರಿಹಾರ ಕೊಡಿಸುವಲ್ಲಿ ಎಲ್ಲಾ ಪಕ್ಷಗಳು ವಿಫಲವಾಗಿದೆ. ಈಗ ಮತ್ತೊಮ್ಮೆ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ಇದು ಅಲ್ಲಿರುವ ಸ್ಥಳೀಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಲಿದೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸುವತ್ತ ಗಮನಹರಿಸಬೇಕಿದೆ.












Click it and Unblock the Notifications