ಬೆಂಗಳೂರು: ಅಹೋರಾತ್ರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಆಗಸ್ಟ್ 14ರ ಮಧ್ಯರಾತ್ರಿಯಿಂದ ಆಗಸ್ಟ್ 15ರ ಮುಂಜಾನೆವರೆಗೆ ಸುರಿದ ಭಾರೀ ಮಳೆ. ಈ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ. ಶಾಂತಿ ನಗರ ಮುಂತಾದೆಡೆ ನೀರು ನುಗ್ಗಿ ಅವಾಂತರ. ಸಂಚಾರವೂ ಅಸ್ತವ್ಯಸ್ತ.
ಬೆಂಗಳೂರು, ಆಗಸ್ಟ್ 15: ಆಗಸ್ಟ್ 14ರ ಮದ್ಯರಾತ್ರಿಯಿಂದ ಆಗಸ್ಟ್ 15 ಬೆಳಗ್ಗೆವರೆಗೂ ಸುರಿದ ಭಾರೀ ಮಳೆಯಿಂದಾಗಿ, ಬೆಂಗಳೂರಿನ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು 174 ಮಿಲಿ ಮೀಟರ್ ಗಳಷ್ಟು ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾಂತಿನಗರ, ವಿಲ್ಸನ್ ಗಾರ್ಡನ್, ಡೈರಿ ಸರ್ಕಲ್, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಮಾರ್ಗ ಮದ್ಯದಲ್ಲಿಯೇ ನೂರಾರು ವಾಹನಗಳು ಕೆಟ್ಟು ನಿಂತಿವೆ. ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ತೀವ್ರವಾಗಿ ಪರದಾಡುವಂತಾಗಿದೆ.

ಹಲವಾರು ರಸ್ತೆಗಳು ಜಲಾವೃತವಾಗಿದ್ದು, ನಗರದ ಹಲವಾರು ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಅಲ್ಲದೆ,ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನರ ನೆಮ್ಮದಿ ಹಾಳುಗೆಡವಿದೆ.

ಕೋರಮಂಗಲದಲ್ಲಿ ಎಸ್ ಟಿ ಬೆಡ್ ಬಡಾವಣೆಯಲ್ಲಿ ಮನೆಗಳಲ್ಲಿ ಮಾತ್ರವಲ್ಲ ಮುಖ್ಯ ರಸ್ತೆಗಳು, ಅಡ್ಡರಸ್ತೆಗಳು - ಹೀಗೆ ಎಲ್ಲೆಲ್ಲೂ ನೀರು ನಿಂತು ಭಾರೀ ತೊಂದರೆಯಾಗಿದೆ. ಎಲ್ಲೆಲ್ಲೂ ನೆರೆ ಹಾವಳಿ ಉಂಟಾದಂತೆ ಭಾಸವಾಗುತ್ತಿದೆ. ಈ ಪ್ರದೇಶದಲ್ಲಿ 5 ಅಡಿಯಷ್ಟು ನೀರು ನಿಂತಿದೆ.
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications