ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಇನ್ನೂ ಎರಡು ದಿನ ಮಳೆ...ಚಳಿ

|
Google Oneindia Kannada News

ಬೆಂಗಳೂರು, ನವೆಂಬರ್ 21 : ಮಳೆ ಯಾವಾಗ ಬಿಡುತ್ತದೆಯೋ? ಎಂದು ಕಾಯುತ್ತಿರುವ ಬೆಂಗಳೂರಿನ ಜನರಿಗೆ ಕಹಿ ಸುದ್ದಿ. ಇನ್ನೂ ಎರಡು-ಮೂರು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಶನಿವಾರ ಸಂಜೆಯೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಅರಬ್ಬಿ ಸಮುದ್ರಲ್ಲಿನ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕ, ಗೋವಾ, ಕೇರಳ ಮತ್ತು ಮಧ್ಯ ಮಹಾರಾಷ್ಟ ಭಾಗದಲ್ಲಿ ಮಳೆ ಸುರಿಯಲಿದೆ. [ಭಾರಿ ಮಳೆಗೆ ತತ್ತರಿಸಿದ ಆಂಧ್ರದ ದೇಗುಲ ನಗರಿಗಳು]

rain

ಕರ್ನಾಟಕದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇನ್ನೆರೆಡು ದಿನ ಸಾಧರಣ ಮಳೆಯಾಗಲಿದೆ. ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು-ಮೂರು ದಿನ ತುಂತುರು ಮಳೆಯಾಗಲಿದೆ. [ದಾಖಲೆ ಪ್ರಮಾಣದಲ್ಲಿ ಬೆಂಗಳೂರಲ್ಲಿ ಮಳೆ]

ಶನಿವಾರವೂ ಮಳೆ : ಬೆಂಗಳೂರಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ಭಾರಿ ಸಂಚಾರದಟ್ಟಣೆ ಉಂಟಾಗಿತ್ತು. ಸಂಜೆಯ ಹೊತ್ತಿಗೆ ಆರಂಭವಾದ ಮಳೆ ರಾತ್ರಿಯಿಡೀ ಸುರಿದಿತ್ತು. ಶನಿವಾರ ಸಂಜೆಯೂ ಬೆಂಗಳೂರು ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತೊಂದು ಚಂಡಮಾರುತ? : ಸದ್ಯ ಸುರಿಯುತ್ತಿರುವ ಮಳೆಯ ನಡುವೆಯೇ ಮತ್ತೊಂದು ಚಂಡ ಮಾರುತ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಳು ಗೋಚರಿಸುತ್ತಿವೆ. ಇದರ ಪರಿಣಾಮ ಭಾನುವಾರಿಂದ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

English summary
Karnataka State Natural Disaster Monitoring Center forecast says that, Bengaluru city, Kalavali and Malnad region likely to receive heavy rain for next two ti three days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X