Rain in Bengaluru: ಬೆಂಗಳೂರಿನ ವಿವಿಧೆಡೆ ಧಾರಾಕಾರ ಮಳೆ!
Rain in Bengaluru: ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆಯಾಗುತ್ತಿದ್ದು, ಶನಿವಾರ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ದೇವನಹಳ್ಳಿ, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಆವಲಹಳ್ಳಿ, ವೈಟ್‌ಫೀಲ್ಡ್ ಹಾಗೂ ನಾಗಾವರ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಕರ್ನಾಟಕದ ವಿವಿಧ ಭಾಗದಲ್ಲಿ ಪೂರ್ವ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಶಾಖದ ಅಲೆ ಇತ್ತು ಇದೀಗ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ತಂಪಾದ ವಾತಾವರಣ ನಿರ್ಮಾಣವಾಗಿದೆ. ಇನ್ನೊಂದು ವಾರ ಮಳೆ ಮುಂದುವರಿಯಲಿದೆ.

ಬೆಂಗಳೂರಿನ ಕೃಷ್ಣರಾಜಪುರ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು. ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮುಂದಿನ ಮೂರರಿಂದ ಐದು ದಿನಗಳ ವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸೈಕ್ಲೋನ್ ಪ್ರಭಾವ ಭಾರೀ ಮಳೆ: ಬೆಂಗಳೂರಿನ ಸೈಕ್ಲೋನ್ ಪ್ರಭಾವದಿಂದ ಇನ್ನೊಂದು ವಾರ ಮಳೆ ಇರಲಿದೆ. ಆಗ್ನೇಯ ಬಂಗಾಳ, ಆಂಧ್ರಪ್ರದೇಶದ ಕರಾವಳಿ, ತಮಿಳುನಾಡಿನಲ್ಲಿ ಸೈಕ್ಲೋನ್ ಸೃಷ್ಟಿಯಾಗಿದೆ. ಹೀಗಾಗಿ, ತೆಲಂಗಾಣ, ಉತ್ತರ ತಮಿಳುನಾಡು ಹಾಗೂ ಕರ್ನಾಟಕದಲ್ಲೂ ಧಾರಾಕಾರ ಮಳೆ ಆಗಲಿದೆ ಎಂದು ಹೇಳಲಾಗಿದೆ. ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.
ಮುಂದಿನ 24 ಗಂಟೆ ಅವಧಿ: ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಇನ್ನು ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ಮುಂದಿನ 48 ಗಂಟೆ ಅವಧಿ: ಮುಂದಿನ 48 ಗಂಟೆಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಲಿದೆ. ಅಲ್ಲದೇ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಇನ್ನು ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬಿಬಿಎಂಪಿಯಿಂದಲೂ ಮುಂಜಾಗ್ರತಾ ಕ್ರಮ: ಇನ್ನು ಬೆಂಗಳೂರಿನಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ ಆಗುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದಲೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಬಿಬಿಎಂಪಿಯ ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿ ಅವರು ಪಾಲಿಕೆಯ ಅಧಿಕಾರಿಗಳಿಗೆ ಮುನ್ಸೂಚನೆ ನೀಡಿದ್ದಾರೆ.












Click it and Unblock the Notifications