Karnataka Rain: ಕರ್ನಾಟಕದಲ್ಲಿ ಮಳೆ, ಈ ಭಾಗದಲ್ಲಿ ಶಾಖ ಅಲೆಯ ಎಚ್ಚರಿಕೆ!

Karnataka Rain: ರಾಜ್ಯದಲ್ಲಿ ಏಕಕಾಲಕ್ಕೆ ಮಳೆ ಹಾಗೂ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ಕೊಟ್ಟಿದೆ. ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನೂ ನೀಡಲಾಗಿದೆ.

ಈಶಾನ್ಯ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಈಗ ಸಮಭಾಜಕ ಹಿಂದೂ ಮಹಾಸಾಗರ ಮತ್ತು ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಸರಾಸರಿ ಸಮುದ್ರಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ ಇಂದಿನಿಂದಿ ವಿವಿಧ ಭಾಗದಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

Rain in Karnataka and Heat Wave Warning in This Part

ಎಲ್ಲೆಲ್ಲಿ ಮಳೆಯಾಗಲಿದೆ ?

ಇಂದು (ಮಾರ್ಚ್‌ 11) ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗಲಿದೆ. ಮಾರ್ಚ್‌ 12ಕ್ಕೆ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.

ಶಾಖದ ಅಲೆಯ ಎಚ್ಚರಿಕೆ: ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ರಾಜ್ಯದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಭಾರೀ ಬಿಸಿಲು ಇರಲಿದ್ದು ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನು ಕೊಡಲಾಗಿದೆ.

ಉಷ್ಣಅಲೆಯ ಎಚ್ಚರಿಕೆಯನ್ನು ಕರಾವಳಿ ಭಾಗದಲ್ಲಿ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಬಿಸಿಯ ವಾತಾವರಣ ಇರಲಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಾಪಮಾನದ ಮುನ್ಸೂಚನೆ: ಮುಂದಿನ 5 ದಿನಗಳ ವರೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಲಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ ಹೇಗಿದೆ

ಇನ್ನು ರಾಜ್ಯದಲ್ಲಿ ಮಳೆಯ ಮುನ್ಸೂಚನೆಯನ್ನೂ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇದೇ ತಿಂಗಳು ಮೂರನೇ ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಉಷ್ಣವಲಯ ಹಾಗೂ ಪೂರ್ವ ಟ್ರಫ್‌ನಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಶಾಖದ ಅಲೆಯ ಎಚ್ಚರಿಕೆ: ಇನ್ನು ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಶಾಖದ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಿಸಿಲಿ ಝಳ ಜೋರಾಗಿ ಇರುವ ಹಿನ್ನೆಲೆಯಲ್ಲಿ ಸಣ್ಣ ಮಕ್ಕಳು ಹಾಗೂ ವಯೋವೃದ್ಧರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮುಂದಿನ ಒಂದು ವಾರದ ಅವಧಿಗೆ ಸಾಧ್ಯವಾದಷ್ಟು ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯ ವರೆಗೆ ಬಿಸಿಲಿನಲ್ಲಿ ಅಥವಾ ಹೊರಗೆ ಹೋಗುವುದನ್ನು ತಪ್ಪಿಸಿ. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹಾಗೂ ಹತ್ತಿ ಬಟ್ಟೆಗಳನ್ನು ಧರಿಸಿ. ತಲೆಯ ಭಾಗವನ್ನು ಬಟ್ಟೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮುಚ್ಚಿಕೊಳ್ಳಿ.

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ ?

ಬೆಂಗಳೂರಿನಲ್ಲಿ ಈ ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ 24 ಗಂಟೆಯ ಅವಧಿಯಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇರಲಿದೆ. ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಹೆಚ್ಚು ಉಷ್ಣಾಂಶವು 38.6 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ. ಅತೀ ಕಡಿಮೆ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್‌ ದಾವಣಗೆರೆಯಲ್ಲಿ ದಾಖಲಾಗಿದೆ.

ಬೆಂಗಳೂರಲ್ಲಿ ಬಿಸಿಲು ಹೆಚ್ಚಳ: ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಸಿಲ ಝಳ ತೀವ್ರವಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕಳೆದ ವರ್ಷವೂ ಬೆಂಗಳೂರಿನಲ್ಲಿ ಭಾರೀ ಬಿರುಬಿಸಿಲು ಇತ್ತು. ಈ ವರ್ಷವೂ ಇದೇ ಮಾದರಿ ಬಿಸಿಲು ಅಥವಾ ಅದಕ್ಕಿಂತ ಹೆಚ್ಚಿನದ್ದು ಇರಲಿದೆ ಎಂದು ಹೇಳಲಾಗಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ: ನೆರೆಯ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 14 ರವರೆಗೆ 12 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದ್ದು. ಭಾರೀ ಮಳೆಯಿಂದಾಗಿ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡಿನಲ್ಲಿ ಮಳೆಯಾಗಲಿದ್ದು, ಇದು ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲೂ ಪ್ರಭಾವಿ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು. ಕರ್ನಾಟಕ ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲದೆ ಕರ್ನಾಟಕದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ವೆದರ್‌ ರಿಪೋರ್ಟ್‌ ಹೇಳಿದೆ.

ಉತ್ತರ ಭಾರತದಲ್ಲಿ ಹೇಗಿದೆ ಹವಾಮಾನ ?

ಉತ್ತರ ಭಾರತದಲ್ಲಿ ಹವಾಮಾನ ವೈಪರೀತ್ಯವು ಮುಂದುವರಿದಿದೆ. ದೆಹಲಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಹಾಗೂ ಹಿಮ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಮಾರ್ಚ್ 12ರಿಂದ ಗುಜರಾತ್‌ನಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಹಾಗೂ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮಾರ್ಚ್ 13 ಹಾಗೂ 14ಕ್ಕೆ ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಉತ್ತರಾಖಂಡ, ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಅಸ್ಸಾಂನಲ್ಲಿ ಚಂಡಮಾರುತ ಪರಿಚಲನೆಯಿಂದಾಗಿ ಈಶಾನ್ಯ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬೇಸಿಗೆಯಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ವೆದರ್‌ ರಿಪೋರ್ಟ್‌ನಲ್ಲಿ ಮಾಹಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+