ಏಪ್ರಿಲ್ 29 ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್‌ ಘೋಷಣೆ- ಮಾಹಿತಿ, ವಿವರ ತಿಳಿಯಿರಿ

ಬೆಂಗಳೂರು, ಏಪ್ರಿಲ್‌ 26: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೊ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಏಪ್ರಿಲ್ 26-29 ರವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದಲ್ಲಿ ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಖಚಿತಪಡಿಸಿದೆ.

Rain likely in Bengaluru till April 29: Yellow alert declared - Know information, details

ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಏಪ್ರಿಲ್ 29ಕ್ಕೆ ದಕ್ಷಿಣ ಒಳ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 29 ರಂದು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

'ಮಂಗಳವಾರ ಸಮುದ್ರ ಮಟ್ಟದಿಂದ 1.5 ಕಿಲೋಮೀಟರ್ ಎತ್ತರದಲ್ಲಿ ಮರಾಠವಾಡದಿಂದ ದಕ್ಷಿಣ ಕರ್ನಾಟಕದವರೆಗೆ ಗಾಳಿ ಸ್ಥಗಿತಗೊಂಡಿದೆ. ಇದರಿಂದಾಗಿ ಕರ್ನಾಟಕದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ' ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ.

ಏಪ್ರಿಲ್ 26 ಮತ್ತು 27 ರಂದು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ (ಗುಡುಗು ಹಾಗೂ ಮಿಂಚು) ನೀಡಲಾಗಿದೆ. ಏಪ್ರಿಲ್ 28, 29 ಮತ್ತು 30 ರಂದು ಕರಾವಳಿ ಕರ್ನಾಟಕಕ್ಕೂ ಗುಡುಗು, ಮಿಂಚು ಮತ್ತು ಮಳೆಯ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರದ ತಾಪಮಾನದಲ್ಲಿ ಇಳಿಮುಖ

ಕಳೆದ ವಾರದಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿನ ತಾಪಮಾನವನ್ನು ವರದಿ ಮಾಡಿದ ಬೆಂಗಳೂರು ನಗರದಲ್ಲಿ ಬುಧವಾರ 33.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ನಗರದಲ್ಲಿ ಗರಿಷ್ಠ ತಾಪಮಾನವು 33 ರಿಂದ 34 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ.

ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ವಿಜಯಪುರದಲ್ಲೂ ತಾಪಮಾನದಲ್ಲಿ ಕುಸಿತ ಕಂಡುಬಂದಿದ್ದು, ಏಪ್ರಿಲ್ ಮೂರನೇ ವಾರದಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+