ಈ ಜಿಲ್ಲೆಗಳಲ್ಲಿ ಮೂರು ದಿನ ಬಟ್ಟೆ ಒಣಗುವುದಿಲ್ಲ
ಬೆಂಗಳೂರು, ನವೆಂಬರ್ 09 : ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಸೋಮವಾರದಿಂದ ಮೂರುದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. [ತಮಿಳುನಾಡಿನಲ್ಲಿ 'ರೋನು' ಅಬ್ಬರ, ಭಾರೀ ಮಳೆ]
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ. ಸೋಮವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. [ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವೆಬ್ ಸೈಟ್]

ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 'ತಮಿಳುನಾಡಿನ ಚೆನ್ನೈ, ನಾಗಪಟ್ಟಣಂ, ವೇಲೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಚಂಡಮಾರುತ ಇಂದು ಸಂಜೆ ವೇಳೆಗೆ ತಮಿಳುನಾಡಿಗೆ ಅಪ್ಪಳಿಸಲಿದ್ದು, ಇದರ ಪ್ರಭಾವದಿಂದ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮಳೆಯಾಗಲಿದೆ' ಎಂದು ಹೇಳಿದ್ದಾರೆ. [ಮದ್ದೂರಿನಲ್ಲಿ ಪ್ರವಾಹ ನೋಡಲು ಮುಗಿಬಿದ್ದ ಜನ!]
ನಗರಾದ್ಯಂತ ಮಳೆ ಬರುವ ವಾತಾವರಣ ಇದ್ದು, ನಿಮ್ಮ ವಾಹನಗಳನ್ನು ಮರಗಳ ಕೆಳಗೆ ನಿಲ್ಲಿಸಬೇಡಿ. ನಿಧಾನವಾಗಿ ವಾಹನ ಚಲಾಯಿಸಿ. ಸುರಕ್ಷಿತವಾಗಿ ತಲುಪಿ. ವ...
Posted by Bengaluru Traffic Police onSunday, November 8, 2015
ಮಳೆ, ಶೀತಗಾಳಿ : ಸೋಮವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ, ಶೀತಗಾಳಿ ಇರುತ್ತದೆ ಎಂದು ಶ್ರೀನಿವಾಸ ರೆಡ್ಡಿ ಅವರು ಹೇಳಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ. [ಬರಡಾಗಿದ್ದ ಶಿಂಷಾ ನದಿಗೆ ಮತ್ತೆ ಜೀವಕಳೆ ತಂದ ಮಳೆ]
ಕರಾವಳಿಯಲ್ಲೂ ಮಳೆ : ಬೆಂಗಳೂರು, ಕೋಲಾರ, ಮೈಸೂರು ಮುಂತಾದ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವುದಿಲ್ಲ ಸೋಮವಾರದಿಂದ ಮೂರು ದಿನಗಳ ಕಾಲ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಸುರಿಯಲಿದೆ. ಕರಾವಳಿ ಪ್ರದೇಶದಲ್ಲಿ 50 ರಿಂದ 60 ಕಿಮಿ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಕಡಲಿಗೆ ಇಳಿಯಬಾರದೆಂದು ಜಿಲ್ಲಾಡಳಿದ ಸೂಚನೆ ಹೊರಡಿಸಿದೆ. ಟೇಕ್ ಕೇರ್ !
ತಮಿಳುನಾಡಿನಲ್ಲಿ ಭಾರೀ ಮಳೆ : ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದರೆ ಅತ್ತ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. 'ರೋನು' ಚಂಡಮಾರುತದ ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಸುಮಾರು 8 ಜಿಲ್ಲೆಗಳಲ್ಲಿ ಶಾಲೆ, ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.











Click it and Unblock the Notifications