ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನು 2 ದಿನ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಏ.19:ಸತತ ಎರಡು ದಿನಗಳಿಂದ ಕಾದಿದ್ದ ಬೆಂಗಳೂರಿಗೆ ತಂಪೆರೆದಿರುವ ಮಳೆರಾಯ ಇಂದೂ ಕೂಡ ಕೃಪಡೆ ತೋರಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬುಧವಾರ ಸುರಿದ ಮಳೆಯಿಂದ ಗುರುವಾರ ಬಂದ ಮಳೆಗೆ ಹಲವೆಡೆ ರಸ್ತೆಗಳಲ್ಲೇ ನೀರು ನಿಂತು ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಗುಜರಾತ್, ಮಧ್ಯಪ್ರದೇಶ, ರಾಜಸ್ತಾನ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಿದ್ದು ಇದುವರೆಗೆ 64 ಮಂದಿ ಮೃತಪಟ್ಟಿದ್ದಾರೆ. ಇದೀಗ ಕರ್ನಾಟಕದಲ್ಲೂ ಮಳೆಯ ಸಿಂಚನವಾಗುತ್ತಿದೆ.

ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆ ಸಾಧ್ಯತೆ ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ ಮಳೆ ಸಾಧ್ಯತೆ

ಬೆಂಗಳೂರು ನಗರವಷ್ಟೇ ಅಲ್ಲದೆ ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು ಇದೀಗ ಮಧ್ಯಾಹ್ನ 2 ಗಂಟೆ ನಂತರ ಮತ್ತೆ ಶುಭ್ರ ಆಕಾಶ ಗೋಚರಿಸುತ್ತಿದೆ. ಆದರೂ ಬೆಂಗಳೂರು ಮಳೆಯನ್ನು ನಂಬಲು ಸಾಧ್ಯವೇ ಇಲ್ಲ, ಯಾಕೆಂದರೆ ಗುರುವಾರ 4 ಗಂಟೆಯವರೆಗೂ ಬಿಸಿಲಿದ್ದು ಕೊನೆಗೆ ಏಕಾಏಕಿ ಮಳೆ ಬಂದಿತ್ತು.

Rain or Thundershowers very likely towards Friday evening in Bengaluru

ಬೆಂಗಳೂರು ನಗರದ ಗರಿಷ್ಠ 35.6 ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್, ಕೆಐಎನಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು 48 ಗಂಟೆಗಳ ಕಾಲ ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿಯಲ್ಲಿ 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Partly cloudy sky, Rain or Thundershowers very likely towards Friday evening or Night in Bengaluru. Maximum and minimum temperatures very likely to be around 34 and 21 degree Celsius respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X