ಬೆಂಗಳೂರಲ್ಲಿ ಮಳೆ ಸಮಸ್ಯೆ: ಬಿಬಿಎಂಪಿಯ ಫ್ರೀ ಹೆಲ್ಪ್‌ಲೈನ್ ನಂಬರ್ ಇಲ್ಲಿದೆ
ಬೆಂಗಳೂರಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನ ಪರದಾಡುತ್ತಿದ್ದಾರೆ. ಬೆಂಗಳೂರಲ್ಲಿ ಜನರ ಸಮಸ್ಯೆ ಎದುರಾದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಚಿತ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಿಬಿಎಂಪಿಯ ಅಧಿಕಾರಿಗಳು ನಿಮ್ಮ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ. ಮಳೆಯಿಂದ ನೀರು ನಿಂತಿದ್ದರೆ ಅಥವಾ ಮರ ಬೀಳುವುದು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಈ ಸಹಾಯವಾಣಿಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ.
ನಗರದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ನಗರದ ಜನ ರೋಸಿ ಹೋಗಿದ್ದಾರೆ. ಆಘಾತಕಾರಿ ವಿಷಯವೆಂದರೆ ಇದೇ ರೀತಿ ಧಾರಾಕಾರ ಮಳೆ ಶುಕ್ರವಾರದ ವರೆಗೂ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರಲ್ಲಿ ಸೋಮವಾರ ಹಾಗೂ ಮಂಗಳವಾರ ಸುರಿದ ಮಳೆಯಿಂದ ಭಾರೀ ಅನಾಹುತವೇ ಸಂಭವಿಸಿದೆ. ಅಲ್ಲದೇ ಸಾವು ನೋವು ಸಹ ಸಂಭವಿಸಿದೆ. ನಿರಂತರ ಮಳೆಯಿಂದಾಗಿ ಅಪಾರ ಪ್ರಮಾಣದ ಅಸ್ತಿಗೂ ಹಾನಿಯಾಗಿದೆ.

ಬೆಂಗಳೂರಲ್ಲಿ ಮಳೆ ಅನಾಹುತ ತಡೆಯುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಶ್ರಮಿಸುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8 ವಲಯಗಳಿದ್ದು, ಎಂಟೂ ವಲಯಗಳಲ್ಲೂ ಬಿಬಿಎಂಪಿಯ ಸಹಾಯವಾಣಿ ಇದೆ. ಮಳೆಯಿಂದ ಜನರಿಗೆ ಸಮಸ್ಯೆಯಾದರೆ, ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ.
ಅಲ್ಲದೇ ಬಿಬಿಎಂಪಿಯ ಕೇಂದ್ರ ಕಚೇರಿಯ ಸಹಾಯವಾಣಿಯೂ ಸಾರ್ವಜನಿಕರ ನೆರವಿಗೆ ಬರಲಿದೆ. ಮಳೆ ಪ್ರಾರಂಭವಾದ ಮೇಲೆ ದೂರುಗಳ ಸುರಿಮಳೆಯೇ ಶುರುವಾಗಿದೆ. ಬೃಹತ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫ್ರೀ ಸಹಾಯವಾಣಿ ಸಂಖ್ಯೆಯ ವಿವರ ಇಲ್ಲಿದೆ. ಬಿಬಿಎಂಪಿ 24*7 (ಉಚಿತ ಸಹಾಯವಾಣಿ) ಟೋಲ್ ಫ್ರೀ ಸಂಖ್ಯೆ 1533ಗೆ ಕರೆ ಮಾಡಬಹುದು.
ಬಿಬಿಎಂಪಿ ಕಂಟ್ರೋಲ್ ರೂಮ್ ಸಂಖ್ಯೆ: 08022660000/08022975595/ 08022221188 ವಾಟ್ಸಪ್ ಸಹಾಯವಾಣಿ ಸಂಖ್ಯೆ: 9480685700
ಪೂರ್ವ ವಲಯ: 9480685702,080-22975803
ಪಶ್ಚಿಮ ವಲಯ: 9480685703,08023561692 ಮತ್ತು 08023463366
ದಕ್ಷಿಣ ವಲಯ: 9480685704, 08026566362 ಮತ್ತು 08022975703
ಮಹದೇವಪುರ ವಲಯ: 9480685706 ಮತ್ತು 08028512300
ಬೊಮ್ಮನಹಳ್ಳಿ ವಲಯ: 9480685707, 08025735642 ಮತ್ತು 08025732447
ಯಲಹಂಕ ವಲಯ: 9480685705, 7022664419,08023636671 ಮತ್ತು 08022975936
ರಾಜರಾಜೇಶ್ವರಿ ನಗರ: 9480685708 ಮತ್ತು 08028601851
ದಾಸರಹಳ್ಳಿ ವಲಯ: 9480685709 ಮತ್ತು 08028394909

1,300ಕ್ಕೂ ಹೆಚ್ಚು ದೂರು: ಬೆಂಗಳೂರಲ್ಲಿ ಮಳೆ ಹೆಚ್ಚಾಗ್ತಿದ್ದು, ಬಿಬಿಎಂಪಿ ಸಹಾಯವಾಣಿಗೆ ದೂರುಗಳ ಸುರಿಮಳೆಯೇ ಶುರುವಾಗಿದೆ. ಮಳೆಯಿಂದ ಬೆಂಗಳೂರಿನ ವಿವಿಧ ವಲಯಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಲ್ಲಿ ಬಿಬಿಎಂಪಿಗೆ ಮಂಗಳವಾರ ಮಧ್ಯಾಹ್ನ 3 ಗಂಟೆಯ ವರೆಗೆ ಮಳೆ ಅನಾಹುತ ಹಾಗೂ ಮಳೆ ಸಮಸ್ಯೆಗೆ ಸಂಬಂಧಿಸಿದಂತೆ 1,328ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಅದರಲ್ಲಿ 590 ದೂರುಗಳನ್ನು ಪರಿಹರಿಸಿರುವುದಾಗಿ ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಳೆ ಮುಂದುವರಿಯುತ್ತಿದ್ದು ನಗರದಲ್ಲಿರುವ ಅಪಾರ್ಟ್‌ಮೆಂಟ್ ಹಾಗೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಆಗಿದೆ. ಮಳೆ ನೀರು ನಿಂತು ಬೈಕ್ ಹಾಗೂ ಕಾರುಗಳಿಗೂ ಹಾನಿಯಾಗಿದ್ದು, ಜನ ಕಂಗಾಲಾಗಿದ್ದಾರೆ. ಮಳೆಯಿಂದ ಸಮಸ್ಯೆ ಹೆಚ್ಚಾಗುತ್ತಿದ್ದು, ಬಿಬಿಎಂಪಿ ಸಹಾಯವಾಣಿಗೆ ಜನ ಕರೆ ಮಾಡುತ್ತಿದ್ದಾರೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications