• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಮುಂಬರುವ 48 ಗಂಟೆಗಳಲ್ಲಿ ಮಳೆ ಮುನ್ಸೂಚನೆ

|

ಬೆಂಗಳೂರು, ಆಗಸ್ಟ್.30: ಸಿಲಿಕಾನ್ ಸಿಟಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿಯಾಗಿರುವ ಸಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ.

   NIAಗೆ ವರ್ಗವಾಗುತ್ತಾ ಬೆಂಗಳೂರು ಗಲಭೆ ಪ್ರಕರಣ..? | Oneindia Kannada

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಭಾನುವಾರ ಮತ್ತು ಸೋಮವಾರ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರದಿಂದ ಮಂಗಳವಾರದವರೆಗೂ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಗುರುವಾರದವರೆಗೂ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ.

   ಉತ್ತರ ಭಾರತದ ರಾಜ್ಯಗಳಲ್ಲಿ ಶುಕ್ರವಾರ ಸಾಧಾರಣ ಮಳೆ

   ಆಗಸ್ಟ್.30ರಿಂದ ಸಪ್ಟೆಂಬರ್.1ರವರೆಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದ್ದು, ಸಪ್ಟೆಂಬರ್.2 ಮತ್ತು 3ರಂದು ಬಿರುಗಾಳಿ ಸಹಿತ ಮಧ್ಯಮ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಆಗಸ್ಟ್.30 ಮತ್ತು 31ರಂದು ಮಳೆಯಾಗವು ಸಾಧ್ಯತೆ ಹೆಚ್ಚಾಗಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್:

   ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

   English summary
   Rain Update: Rainfall Likely In Upcoming 48 Hours At Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X