ಬೆಂಗಳೂರಲ್ಲಿ ಸೆ.21ರವರೆಗೂ ಸುರಿಯಲಿದೆ ನಿರಂತರ ಮಳೆ
Recommended Video

ಬೆಂಗಳೂರು, ಸೆಪ್ಟೆಂಬರ್ 18: ಬೆಂಗಳೂರಲ್ಲಿ ಸೆಪ್ಟೆಂಬರ್ 21ರವರೆಗೂ ಬೆಂಬಿಡದೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿರುವುದರಿಂದ ಸೆ,21ರವರೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ, ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.
ಮೋಡ ಕವಿದ ವಾತಾವರಣ ಹಾಗೂ ಮಳೆಯಿಂದಾಗು ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದೆ. ಇದೀಗ 31ರಿಂದ 28 ಡಿಗ್ರಿ ಸೆಲ್ಸಿಯಸ್ ಗೆ ತಾಪಮಾನ ಇಳಿದಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ನಗರದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಸೋಮವಾರ ಸಂಜೆ ಕೂಡ ನಗರದ ಹೊರವಲಯದಲ್ಲಿ ಹೆಚ್ಚು ಮಳೆಯಾಗಿದೆ. ಗಾಳಿಯ ವೇಗ ಕಡಿಮೆ ಇದ್ದಿದ್ದರಿಂದ ಹಿಂದಿನ ದಿನದಂತೆ ಎಲ್ಲೂ ಹಾನಿ ಸಂಭವಿಸಿಲ್ಲ.
ಸೆಪ್ಟೆಂಬರ್ ಆರಂಭದಿಂದ ಇಲ್ಲಿಯವರೆಗೆ ನಗರದ ಕೇಂದ್ರ ಭಾಗದಲ್ಲಿ 100 ಮಿ.ಮೀ ಮಳೆಯಾಗಿದೆ. ಕೆಐಎಎಲ್ ನಲ್ಲಿ 90.1 ಮಿ.ಮೀ, ಎಚ್‌ಎಎಲ್ ನಲ್ಲಿ 67.2 ಮಿ.ಮೀ ಮಳೆಯಾಗಿದೆ. ನಗರದ ಕೇಂದ್ರ ಭಾಗದಲ್ಲಿ ಇದೀಗ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ.

ಕೆಐಎಎಲ್ ನಲ್ಲಿ ಗರಿಷ್ಠ 30.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.1 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 29.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ 18.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.












Click it and Unblock the Notifications