Bengaluru Rain: ಮುಂದಿನ 3 ದಿನ ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆ: ಹಳದಿ ಅಲರ್ಟ್!
ಬೆಂಗಳೂರು ಮೇ 12: ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯದ್ದೇ ಮಾತು. ನಗರದ ಬಹುತೇಕ ಭಾಗಗಳಲ್ಲಿ ಮಳೆ ಧಾರಾಕಾರವಾಗಿ ಸುರಿಯುವ ಮೂಲಕ ತಂಪಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಹಳದಿ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಮೇ 13ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಗುಡುಗು, ತೀವ್ರ ಗಾಳಿ ಸಹಿತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹಿರಿಯ ಐಎಂಡಿ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮುಂದಿನ ಒಂದು ವಾರದವರೆಗೆ ಮಳೆ ಮುಂದುವರಿಯಲಿದೆ. ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ತಾಪಮಾನ ಮತ್ತಷ್ಟು ತಂಪಾಗಲಿದೆ.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ 7 ಸೆಂಟಿಮೀಟರ್‌ಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್‌ನಲ್ಲಿ ಯಾವುದೇ ಮಳೆಯಾಗಿಲ್ಲ. ಆದರೆ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಸಾಧಾರಣ ಮಳೆ ಮುಂದುವರಿಯುತ್ತಿದೆ. ಈಗಾಗಲೇ ಹಳದಿ ಎಚ್ಚರಿಕೆಯನ್ನು ನೀಡಲಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ 7 ಸೆಂ.ಮೀ ಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹಿರಿಯ ವಿಜ್ಞಾನಿ ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ಮಾಹಿತಿಯ ಪ್ರಕಾರ, ಎರಡು ತಿಂಗಳ ನಿರಂತರ ಸುಡುವ ಶಾಖದಿಂದಾಗಿ ಬೆಂಗಳೂರು ಇತ್ತೀಚೆಗೆ ಮಾರ್ಚ್‌ನಿಂದ ಕನಿಷ್ಠ ಗರಿಷ್ಠ ತಾಪಮಾನವನ್ನು ದಾಖಲಿಸಿದೆ. ಶುಕ್ರವಾರ ಪಾದರಸ ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.
ಬೆಂಗಳೂರಿನ ಹಲವು ಭಾಗ ಮಳೆಯಿಂದಾಗಿ ಜಲಾವೃತವಾಗಿದ್ದು, ನಗರದಾದ್ಯಂತ ಸಂಚಾರ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಜಲಾವೃತವಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.












Click it and Unblock the Notifications