ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ಹೊಸ ವರ್ಷಕ್ಕೆ ಸ್ವಾಗತ ಕೋರಿದ ವರುಣ

|
Google Oneindia Kannada News

ಬೆಂಗಳೂರು, ಜ. 1 : ಹೊಸ ವರ್ಷಾಚರಣೆ ನಂತರ ಬೆಂಗಳೂರಿನಲ್ಲಿ ವರುಣನ ಸಿಂಚನವಾಗಿದೆ. ನಗರದ ಹಲವು ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದ್ದು, ಬೆಳ್ಳಂಬೆಳಗ್ಗೆ ಕಚೇರಿಗೆ ಹೊರಟ ಜನರು ಛತ್ರಿ, ಜರ್ಕಿನ್‌ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ.

ಗುರುವಾರ ಮುಂಜಾನೆ 4.30ರಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮೆಜೆಸ್ಟಿಕ್ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಬೆಳ್ಳಂಬೆಳಗ್ಗೆ ಸಂಚರಿಸುವ ಬಸ್ಸುಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮೆಜೆಸ್ಟಿಕ್, ಬನಶಂಕರಿ 3ನೇ ಹಂತ, ಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕಚೇರಿಗೆ ತೆರಳಲು ಸಿದ್ಧರಾದ ಜನರು ಛತ್ರಿ ಮತ್ತು ಜರ್ಕಿನ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Rain

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕ, ಕರ್ನಾಟಕ ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. [ಹವಾಮಾನ ಇಲಾಖೆ ವೆಬ್ ಸೈಟ್]

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಶುಕ್ರವಾರದ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಿರ್ದೇಶಕರಾದ ಬಿ.ಪುಟ್ಟಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದಲ್ಲಿ ಗರಿಷ್ಠ 29 ಡಿಗ್ರಿ ಮತ್ತು ಕನಿಷ್ಠ 18 ಡಿಗ್ರಿ ಸೆಂಟಿಗ್ರೆಡ್ ಉಷ್ಣಾಂಶವಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Rainfall

English summary
Heavy rainfall has flooded Bengaluru and disrupted normal life across the city on Thursday, January 1 morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X