ಬೆಂಗಳೂರಲ್ಲಿ ಮೋಡಕವಿದ ವಾತಾವರಣ: ಅಲ್ಲಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಡಿಸೆಂಬರ್ 19: ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಮುಂದಿನ 24 ಗಂಟೆಯಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರ, ಕೋಲಾರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶೇ.53ರಷ್ಟು ತೇವಾಂಶವಿದೆ. ಗಾಳಿಯು ಗಂಟೆಗೆ 16 ಕಿ.ಮೀ ವೇಗದಲ್ಲಿ ಬೀಸುತ್ತಿದೆ.
ನಗರದಲ್ಲಿ ಗರಿಷ್ಠ 26.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 26.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.7 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಉಳಿದಂತೆ ಉತ್ತರ ಕರ್ನಾಟಕ, ಕರಾವಳಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ ಗರಿಷ್ಠ 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.












Click it and Unblock the Notifications