ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಮೋಡಕವಿದ ವಾತಾವರಣ: ಅಲ್ಲಲ್ಲಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 19: ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಮುಂದಿನ 24 ಗಂಟೆಯಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ನಗರ, ಕೋಲಾರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶೇ.53ರಷ್ಟು ತೇವಾಂಶವಿದೆ. ಗಾಳಿಯು ಗಂಟೆಗೆ 16 ಕಿ.ಮೀ ವೇಗದಲ್ಲಿ ಬೀಸುತ್ತಿದೆ.

ವಾರಾಂತ್ಯದಲ್ಲಿ ಚೆನ್ನೈ ಸೇರಿದಂತೆ ಮೂರು ರಾಜ್ಯಗಳಲ್ಲಿ ಮಳೆವಾರಾಂತ್ಯದಲ್ಲಿ ಚೆನ್ನೈ ಸೇರಿದಂತೆ ಮೂರು ರಾಜ್ಯಗಳಲ್ಲಿ ಮಳೆ

ನಗರದಲ್ಲಿ ಗರಿಷ್ಠ 26.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.5 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 26.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.7 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Rainfall Likely In Some Parts Of Bengaluru

ಉಳಿದಂತೆ ಉತ್ತರ ಕರ್ನಾಟಕ, ಕರಾವಳಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ ಗರಿಷ್ಠ 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

English summary
The cloudy weather in Bengaluru will be overcast over the next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X