ಬೆಂಗಳೂರು ಹವಾಮಾನ ವರದಿ: ಮುಂದಿನ 2 ದಿನ ಯೆಲ್ಲೋ ಅಲರ್ಟ್
ಬೆಂಗಳೂರು, ನವೆಂಬರ್ 11: ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ. ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನವೆಂಬರ್ 11 ರಂದು ಯೆಲ್ಲೋ ಅಲರ್ಟ್, ನವೆಂಬರ್ 12ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕ; ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ
ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಬೀಸುತ್ತಿದೆ, ಹವಾಮಾನ ಬದಲಾವಣೆಯಾದಂತೆ ಆರೋಗ್ಯ ಸಮಸ್ಯೆಗಳು ಕೂಡ ಹೆಚ್ಚಾಗುವ ಆತಂಕ ಎದುರಾಗಿದೆ.
ಚಿಕ್ಕಬಳ್ಳಾಪುರ 23-16, ಮೈಸೂರು 24-19, ಹಾಸನ 23-17, ಮಂಗಳೂರು 30-24, ಉಡುಪಿ 31-24, ಉತ್ತರ ಕನ್ನಡ 30-19, ಶಿವಮೊಗ್ಗ 28-19, ದಾವಣಗೆರೆ 29-19, ತುಮಕೂರು 24-18 ತಾಪಮಾನ ದಾಖಲಾಗಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದ್ದು, ಬೆಳಗಿನ ಜಾವ ಶೀತಗಾಳಿ ಸುಳಿಯಲಿದೆ.
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತವು ತಮಿಳುನಾಡಿನ ಕರಾವಳಿ ಭಾಗದಲ್ಲಿ ಗುರುವಾರ ಬೆಳಗ್ಗೆ ಭೂಪ್ರದೇಶಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಚೆನ್ನೈನಿಂದ ತಿರುವಳ್ಳೂರ್, ಕಾಂಚೀಪುರಂ, ಚೆಂಗಲ್ಪಟ್ಟು, ಕೊಡಂಬಕ್ಕಂ, ಅಶೋಕನಗರ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡ್ಮೂರು ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ. ಯೆಲಚೇನಹಳ್ಳಿ, ಎಲೆಕ್ಟ್ರಾನಿಕ್‌ಸಿಟಿ, ಉತ್ತರ ಹಳ್ಳಿ, ಕೆಂಗೇರಿ, ಮೈಸೂರು ರಸ್ತೆಯಲ್ಲಿ ಮಳೆಯಾಗುತ್ತಿದೆ.
ಸೋಮವಾರದಿಂದ ಮಂಗಳವಾದವರೆಗೆ ಜಿಲ್ಲೆಯಲ್ಲಿ 15.1 ಮಿ.ಮೀ.ನಷ್ಟು ಮಳೆಯಾಗಿದೆ. ಬಂಟ್ವಾಳ, ಮಂಗಳೂರು, ಮೂಡಬಿದಿರೆ, ಕಡಬ, ಸುಳ್ಯ ಹಾಗೂ ಪುತ್ತೂರು ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿವೆ. ಬುಧವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ನಾಪೋಕ್ಲು ಭಾಗದಲ್ಲಿ ನಾಲ್ಕು ಸೆಂ.ಮೀ.ನಷ್ಟು ಮಳೆಯಾಗಿರೋದು ದಾಖಲಾಗಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಿತ್ತು.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗನಲ್ಲಿ ಒಣ ಹವೆ ಮುಂದುವರಿಯಲಿದೆ.
ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ನಗರದ ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆಯಲ್ಲಿ ಮಳೆ ಸುರಿದು ಜನ ಜೀವನ ಅಸ್ಥವ್ಯಸ್ಥಗೊಂಡಿದೆ.
ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ನವೆಂಬರ್ 12 ರವೆರೆಗೆ, 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದಿನಿಂದ 2 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 2 ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.