• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನ ಹಲವೆಡೆ ಗಾಳಿಯಿಂದ ಕೂಡಿದ ಧಾರಾಕಾರ ಮಳೆ

|

ಬೆಂಗಳೂರು, ಮೇ 12: ಬೆಂಗಳೂರಿನ ಹಲವೆಡೆ ಗಾಳಿಯಿಂದ ಕೂಡಿದ ಧಾರಾಕಾರ ಮಳೆಯಾಗಿದೆ.

ಆರ್‌ಆರ್ ನಗರ, ಬಿಟಿಎಂ ಲೇಔಟ್, ರಾಜಾಜಿನಗರ, ಮಲ್ಲೇಶ್ವರ, ಬಸವನಗುಡಿ, ಯಶವಂತಪುರ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ವೃತ್ತ, ಲಾಲ್‌ಬಾಗ್, ಶಾಂತಿನಗರದಲ್ಲಿ ಹೆಚ್ಚು ಮಳೆಯಾಗಿದೆ.

ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ನಗರದಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಎಚ್‌ಎಎಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 Rainfall Occured At Many Places Of Bengaluru

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

   ಚೀನಾವನ್ನು ಸದ್ಯದರಲ್ಲೇ ಸೈಡ್ ಹೊಡೆಯಲಿದೆ ಭಾರತ | Oneindia Kannada

   ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 16ಕ್ಕೆ ತೌಕ್ಟೆ ಚಂಡಮಾರುತ ಅಪ್ಪಳಿಸಲಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿ ಹಲವೆಡೆ ಮಳೆಯಾಗಲಿದೆ.

   English summary
   Rainfall Occured At Many Places Of Bengaluru Like KR Market, Rajajinagar, Malleshwaram, Shantinagar, Basavanagudi On May 12 Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X