ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.30ರಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ 'ರಾಜಭವನ ಮುತ್ತಿಗೆ' ಚಳವಳಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 29: ರಾಜ್ಯದಲ್ಲಿ ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 30ರಂದು ಟಿ.ಎ. ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜಭವನ ಮುತ್ತಿಗೆ ಚಳವಳಿ ಹಮ್ಮಿಕೊಳ್ಳಲಾಗಿದೆ.

ವಿವಿಧ ಕನ್ನಡ ಪರ ಸಂಘಟನೆಗಳು ಡಿ.31ರಂದು ಕರೆ ನೀಡಿದ್ದ ಕರ್ನಾಟಕ ಬಂದ್‌ಗೂ ಒಂದು ದಿನ ಮುಂಚೆ ಟಿ.ಎ. ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನಲ್ಲಿ ಚಳವಳಿ ಏರ್ಪಡಿಸಿದೆ.

ಎಲ್ಲದ್ದಕ್ಕೂ ಬಂದ್ ಮಾಡುವುದೇ ಪರಿಹಾರವಲ್ಲ: ನಾರಾಯಣಗೌಡ ಎಲ್ಲದ್ದಕ್ಕೂ ಬಂದ್ ಮಾಡುವುದೇ ಪರಿಹಾರವಲ್ಲ: ನಾರಾಯಣಗೌಡ

ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚಾಗುತ್ತಿವೆ. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಗಿದೆ. ಇಡೀ ಮನುಕುಲಕ್ಕೆ ಕಾಯಕ ಧರ್ಮವನ್ನು ನೀಡಿದ ಮಹಾ ಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿಯಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದರು.

Raj Bhavan Siege Protest By the Karnataka Rakshana Vedike on Dec 30

ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಗಿದೆ. ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಸತತ ಹೋರಾಟ ನಡೆಸುತ್ತಿದೆ ಎಂದಿದ್ದಾರೆ.

ಮುಂದುವರೆದ ಪ್ರತಿಭಟನೆಯ ಭಾಗವಾಗಿ ದಿನಾಂಕ 30-12-2021ರಂದು ಬೆಳಿಗ್ಗೆ ಕರ್ನಾಟಕ ರಕ್ಷಣಾ ವೇದಿಕೆ "ರಾಜಭವನ ಮುತ್ತಿಗೆ' ಚಳವಳಿ ಹಮ್ಮಿಕೊಂಡಿದೆ.

ಬೃಹತ್ ಪ್ರತಿಭಟನಾ ಮೆರವಣಿಗೆಯು ಗುರುವಾರ ಬೆಳಿಗ್ಗೆ 12 ಗಂಟೆಗೆ ಸರಿಯಾಗಿ ಬೆಂಗಳೂರಿನ ಸರ್ ಪುಟ್ಟಣ್ಣಚೆಟ್ಟಿ ಟೌನ್‌ಹಾಲ್ ಮುಂಭಾಗದಿಂದ ಆರಂಭಗೊಂಡು ಮೈಸೂರು ಬ್ಯಾಂಕ್ ಮಾರ್ಗವಾಗಿ ರಾಜಭವನ ತಲುಪಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

Raj Bhavan Siege Protest By the Karnataka Rakshana Vedike on Dec 30

ಡಿ.31ರ ಬಂದ್ ತೀರ್ಮಾನದಲ್ಲಿ ಬದಲಾವಣೆ ಇಲ್ಲ
ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಡಿಸೆಂಬರ್ 31ರ ಬಂದ್ ಮುಂದೂಡಿ ಎಂದು ಪತ್ರ ಬರೆದಿದ್ದಾರೆ. ಆದರೆ ಬೆಳಗಾವಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ತೀರ್ಮಾನದಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

ಬುಧವಾರ ಬೆಳಗಾವಿಯಲ್ಲಿ ಮಾತನಾಡಿದ ವಾಟಾಳ ನಾಗರಾಜ್, "ಡಿಸೆಂಬರ್ 31ರ ಕರ್ನಾಟಕ ಬಂದ್ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾರೇ ವಿರೋಧ ಮಾಡಿದರೂ ಬಂದ್ ನಡೆಯಲಿದೆ,'' ಎಂದು ಸ್ಪಷ್ಟಪಡಿಸಿದರು.

Recommended Video

South Africa vs India: ಛೇ!!ಸಖತ್ ಬೌಲಿಂಗ್ ಮಾಡ್ತಿದ್ದ ಯಾರ್ಕರ್ ಕಿಂಗ್ ಬುಮ್ರಾ ಕಾಲಿಗೆ ಗಾಯ | Oneindia Kannada

English summary
Raj bhavan siege Movement has organized by the TA Narayana Gowda-led Karnataka Rakshana Vedika On Dec 30 in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X