ಆರ್.ಆರ್.ನಗರ ಫಲಿತಾಂಶ : 2724 ನೋಟಾ ಮತ ಚಲಾವಣೆ!
ಬೆಂಗಳೂರು, ಮೇ 31 : ವಿವಾದಗಳಿಂದಲೇ ಸುದ್ದಿ ಮಾಡಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು 25 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಕುತೂಹಲ ಹುಟ್ಟಿಸಿರುವುದು ನೋಟಾ ಮತಗಳು. 2,724 ನೋಟಾ ಮತಗಳು ಕ್ಷೇತ್ರದಲ್ಲಿ ಚಲಾವಣೆಯಾಗಿವೆ.
ನೋಟಾ (ಮೇಲಿನ ಯಾವ ಅಭ್ಯರ್ಥಿಗಳೂ ನನ್ನ ಆಯ್ಕೆ ಅಲ್ಲ) ಎಂದು 2724 ಜನರು ಮತ ಹಾಕಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜರಾಜೇಶ್ವರಿ ನಗರದ ಚುನಾವಣಾ ಕಣ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಭಾರೀ ಸುದ್ದಿ ಮಾಡಿತ್ತು.

ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಕ್ಷೇತ್ರದಲ್ಲಿ ಕುಕ್ಕರ್, ಸೀರೆ, ನೀರಿನ ಕ್ಯಾನ್ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಮೇ 6ರಂದು ಕ್ಷೇತ್ರದ ವ್ಯಾಪ್ತಿಯಲ್ಲಿ 95 ಲಕ್ಷಕ್ಕೂ ಅಧಿಕ ಹಣ ಟ್ರಕ್‌ನಲ್ಲಿ ಪತ್ತೆಯಾಗಿತ್ತು.
ಜಾಲಹಳ್ಳಿ ಸಮೀಪದ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ 9,746 ವೋಟರ್ ಐಡಿಗಳನ್ನು ಚುನಾವಣಾ ಆಯೋಗ ವಶಕ್ಕೆ ಪಡೆದುಕೊಂಡಿತ್ತು. ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಜನರು ಹೆಚ್ಚು ನೋಟಾ ಮತಗಳನ್ನು ಹಾಕಿರುವ ಸಾಧ್ಯತೆ ಇದೆ.











Click it and Unblock the Notifications