• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆರ್. ಆರ್. ನಗರ ಚುನಾವಣೆ; ಆನ್‌ಲೈನ್ ಮೂಲಕವೂ ನಾಮಪತ್ರ ಸಲ್ಲಿಸಬಹುದು

|

ಬೆಂಗಳೂರು, ಅಕ್ಟೋಬರ್ 01 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕ್ಷೇತ್ರ ಸೇರುತ್ತದೆ. ಚುನಾವಣಾ ನೀತಿ ಸಂಹಿತೆ ಮಂಗಳವಾರದಿಂದಲೇ ಜಾರಿಗೆ ಬಂದಿದೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೂ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸುವಾಗ ಈ ಕುರಿತು ಮಾಹಿತಿ ನೀಡಿದ್ದಾರೆ.

ಮುನಿರತ್ನ ವಿರುದ್ಧ ಡಿ. ಕೆ. ರವಿ ಪತ್ನಿ ಕಣಕ್ಕೆ?, ಸ್ವಾಮೀಜಿ ಭೇಟಿ

ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಆದ್ದರಿಂದ, ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿಗಳನ್ನು ನಡೆಸುವಂತಿಲ್ಲ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗುವ ತನಕ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಆರ್. ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

ಅಕ್ಟೋಬರ್ 9ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 16ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಆರ್. ಆರ್. ನಗರ ಉಪ ಚುನಾವಣೆ; ಬಿಬಿಎಂಪಿ ಆಯುಕ್ತರ ಸಭೆ

ಆನ್‌ಲೈನ್ ಮೂಲಕ ನಾಮಪತ್ರ

ಆನ್‌ಲೈನ್ ಮೂಲಕ ನಾಮಪತ್ರ

"ಉಪ ಚುನಾವಣೆಗೆ ಅಭ್ಯರ್ಥಿಗಳು ನೇರ ನಾಮಪತ್ರ ಸಲ್ಲಿಕೆ ಜೊತೆ ಆನ್‌ಲೈನ್ ಮೂಲಕವೂ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ನೀಡಿದೆ" ಎಂದು ಬಿಬಿಎಂಪಿ ಆಯುಕ್ತ ಮತ್ತು ಜಿಲ್ಲಾ ಚುನಾವಣಾಧಿಕಾರಿ ಎನ್. ಮಂಜುನಾಥ ಪ್ರಸಾದ್ ಹೇಳಿದ್ದಾರೆ. ಅಕ್ಟೋಬರ್ 9ರಿಂದ 16ರ ತನಕ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದು.

ಕೋವಿಡ್ ಸಂದರ್ಭದಲ್ಲಿ ಚುನಾವಣೆ

ಕೋವಿಡ್ ಸಂದರ್ಭದಲ್ಲಿ ಚುನಾವಣೆ

ಕೋವಿಡ್ ಸಂದರ್ಭದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಮಾರ್ಗಸೂಚಿಗಳನ್ನು ಅಭ್ಯರ್ಥಿಗಳು ಪಾಲನೆ ಮಾಡಬೇಕಿದೆ. ಮಾರ್ಗಸೂಚಿ ಅನ್ವಯ ಮನೆ-ಮನೆ ಪ್ರಚಾರ ಮಾಡಲು 5 ಜನರಿಗೆ ಮಾತ್ರ ಅವಕಾಶವಿದೆ. ರಸ್ತೆಯಲ್ಲಿ ಪ್ರಚಾರ ನಡೆಸಲು 5 ವಾಹನಗಳಿಗೆ ಮಾತ್ರ ಅವಕಾಶವಿದೆ.

ನಗರದ ಅತಿ ದೊಡ್ಡ ಕ್ಷೇತ್ರ

ನಗರದ ಅತಿ ದೊಡ್ಡ ಕ್ಷೇತ್ರ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು ನಗರದಲ್ಲಿಯೇ ಅತಿ ದೊಡ್ಡ ವಿಧಾನಸಭಾ ಕ್ಷೇತ್ರವಾಗಿದೆ. ಭೌಗೋಳಿಕವಾಗಿ ಯಶವಂತಪುರದಿಂದ ರಾಜರಾಜೇಶ್ವರಿ ನಗರದ ತನಕ ಕ್ಷೇತ್ರದ ವ್ಯಾಪ್ತಿ ಇದೆ. ಸುಮಾರು 4.60 ಲಕ್ಷ ಮತದಾರರು ಇದ್ದಾರೆ.

  Bengaluru Moving ಸಮರ್ಪಕವಾಗಿ ಸಾರಿಗೆ ವ್ಯವಸ್ಥೆಯನ್ನು ಬಳಸುವುದು ಹೇಗೆ | Oneindia Kannada
  ಅಭ್ಯರ್ಥಿಗಳ ಆಯ್ಕೆ ಕಸರತ್ತು

  ಅಭ್ಯರ್ಥಿಗಳ ಆಯ್ಕೆ ಕಸರತ್ತು

  ಆರ್. ಆರ್. ನಗರ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿವೆ. ಬಿಜೆಪಿ ಗುರುವಾರ ಸಂಜೆ ಕೋರ್ ಕಮಿಟಿ ಸಭೆ ಕರೆದಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದೆ. ನವೆಂಬರ್ 3ರಂದು ಉಪ ಚುನಾವಣೆ ಮತದಾನ ನಡೆಯಲಿದ್ದು, 688 ಮತಗಟ್ಟೆ ವ್ಯವಸ್ಥೆ ಮಾಡಲಾಗುತ್ತಿದೆ.

  English summary
  Candidates can submit nomination for the Rajarajeshwari Nagar by election through online. Eelection will be held on November 3 and result will be announced on November 10.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X