ಆರ್. ಆರ್. ನಗರ ಚುನಾವಣೆ; ಎಲ್ಲಾ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ

ಬೆಂಗಳೂರು, ನವೆಂಬರ್ 06 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಮುಕ್ತಾಯಗೊಂಡಿದೆ. ಶೇ 45.24ರಷ್ಟು ಮತದಾನ ನಡೆದಿದೆ. ಮತದಾನದ ದಿನ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಎಲ್ಲಾ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ಬೆಂಗಳೂರು ಪೊಲೀಸರು, ವಿಶೇಷ ಪೊಲೀಸ್ ಪಡೆ, ಗೃಹ ರಕ್ಷಕದಳ ಸೇರಿದಂತೆ ಒಟ್ಟು 3000 ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು. ಈ ಎಲ್ಲಾ ಸಿಬ್ಬಂದಿಗಳು ಈಗ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಿದೆ.

ಕೋವಿಡ್ ನಿರ್ವಹಣೆ ನೋಡಿಕೊಳ್ಳುತ್ತಿರುವ ತಾಂತ್ರಿಕ ಸಮಿತಿ ಆರ್. ಆರ್. ನಗರ ಉಪ ಚುನಾವಣೆ ವೇಳೆ ಹಲವು ಕಡೆ ಜನರು ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿಲ್ಲ ಎಂದು ಹೇಳಿದೆ. ಆದ್ದರಿಂದ, ಚುನಾವಣಾ ಕಾರ್ಯದಲ್ಲಿದ್ದ ಸಿಬ್ಬಂದಿಗೆ ಪರೀಕ್ಷೆ ಮಾಡಲಾಗುತ್ತದೆ.

Rajarajeshwari Nagar By Elections COVID Test For All Police Personnel

ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಆರ್. ಆರ್. ನಗರ ಕ್ಷೇತ್ರದಲ್ಲಿ ಪರೀಕ್ಷೆಗಳನ್ನು ಹೆಚ್ಚಿಲು ಸಹ ಬಿಬಿಎಂಪಿ ಚಿಂತನೆ ನಡೆಸಿದೆ. ಇದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗುತ್ತದೆ.

ಬಿಬಿಎಂಪಿ ಸಹ ಚುನಾವಣಾ ಕಾರ್ಯಕ್ಕೆ ನಿಯೋಜನೆ ಮಾಡಿದ್ದ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಿದೆ. ನವೆಂಬರ್ 10ರಂದು ಉಪ ಚುನಾವಣೆಯ ಮತ ಎಣಿಕೆ ನಡೆಯಲಿದೆ.

ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ಗುರುವಾರ ನಗರದಲ್ಲಿ 1627 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3,45,134ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,716.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+