ರಾಜೀವ್ ಗಾಂಧಿ ಹತ್ಯೆ ಕುರಿತ ಪುಸ್ತಕ ಬಿಡುಗಡೆ ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಜನವರಿ 10: ಡಾ.ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ "ರಾಜೀವ್ ಗಾಂಧಿ ಭೀಕರ ಹತ್ಯೆ" ಮಾದರಿ ತನಿಖೆಯೆ ಸೂಕ್ಷ್ಮ ಮಜಲುಗಳು ಪುಸ್ತಕವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಧಾನಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣವನ್ನು ತನಿಖೆ ಮಾಡಿ, ಆ ಬಗೆಗಿನ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತಂದಿರುವುದಕ್ಕಾಗಿ ಡಿ.ಆರ್.ಕಾರ್ತಿಕೇಯನ್ ಹಾಗೂ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಾ:ಡಿ.ವಿ.ಗುರುಪ್ರಸಾದ್ ಅವರನ್ನು ಅಭಿನಂದಿಸಿದರು.
ರಾಜ್ಯದ ಪೋಲಿಸ್ ಅಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಈ ಗಂಭೀರ ಪ್ರಕರಣದ ಯಶಸ್ವಿ ತನಿಖೆ ನಡೆಸಿದ್ದು ಶ್ಲಾಘನೀಯ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಉತ್ತಮ ಅಧಿಕಾರಿಗಳು ಕಾರಣ. ಇಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಮೈತ್ರಿ ಸರ್ಕಾರ ಗುರುತಿಸಿ ಉತ್ತೇಜನ ನೀಡುತ್ತದೆ ಎಂದರು.

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ
ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಡಾ:ಡಿ.ಆರ್.ಕಾರ್ತಿಕೇಯನ್, ಡಾ:ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications