ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿಗೆ ಸಿಎಂ, ಡಿಸಿಎಂ ಶ್ರದ್ಧಾಂಜಲಿ ಅರ್ಪಣೆ: ತಂದೆ ನೆನೆದು 'ರಾಗಾ' ಭಾವುಕ
ಬೆಂಗಳೂರು, ಮೇ 21: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32 ನೇ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಉಪ ಡಿಕೆ ಶಿವಕುಮಾರ್ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ಇತ್ತ ತಂದೆ ನೆನೆದು ರಾಹುಲ್ ಗಾಂಧಿಯವರು ವಿಡಿಯೋ ವೊಂದನ್ನು ಟ್ವೀಟ್ ಮಾಡದ್ದಾರೆ.
पापा, आप मेरे साथ ही हैं, एक प्रेरणा के रूप में, यादों में, सदा! pic.twitter.com/WioVkdPZcr
— Rahul Gandhi (@RahulGandhi) May 21, 2023
ಶನಿವಾರ ವಷ್ಟೇ ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮಾಣವಚನ ಮಾಡಿದರು. ಅವರೊಂದಿಗೆ ಎಂಟು ಮಂದಿ ಶಾಸಕರು ಸಹ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳಗ್ಗೆ ಎಐಸಿಸಿ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಪುಷ್ಪನಮನ ನಮನ ಸಲ್ಲಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಂದೆಗೆ ಶ್ರದ್ಧಾಂಜಲಿ ಅರ್ಪಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 'ಅಪ್ಪಾ, ನೀವು ಸ್ಫೂರ್ತಿಯಾಗಿ ನೆನಪುಗಳಲ್ಲಿ ಯಾವಾಗಲೂ ನನ್ನೊಂದಿಗೆ ಇದ್ದೀರಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. ತಂದೆ ವಿಡಿಯೋವೊಂದನ್ನು ಅವರು ಪೊಸ್ಟ್ ಮಾಡಿದ್ದಾರೆ.
1984 ರಲ್ಲಿ ರಾಜೀವ್ ಗಾಂಧಿ ಅವರು ತಮ್ಮ ತಾಯಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಎಐಸಿಸಿಯ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡರು. ಅಕ್ಟೋಬರ್ 1984 ರಲ್ಲಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡಾಗ ಅವರಿಗೆ ಆಗ 40 ವರ್ಷ ವಯಸ್ಸು. ಈ ಮೂಲಕ ಭಾರತದ ಅತ್ಯಂತ ಕಿರಿಯ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾದರು.

1944 ರ ಆಗಸ್ಟ್ 20 ರಂದು ಜನಿಸಿದ ರಾಜೀವ್ ಗಾಂಧಿ, ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (LTTE) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು. ಅವರ ಇಂದಿನ 32 ನೇ ಪುಣ್ಯತಿಥಿಯನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು.












Click it and Unblock the Notifications