ರಾಜೀವ್ ಆರೋಗ್ಯ ಭಾಗ್ಯ ಯೋಜನೆ: ಪತ್ರಕರ್ತರಿಂದ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 08: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ರಾಜೀವ್ ಆರೋಗ್ಯ ಭಾಗ್ಯ ಯೋಜನೆ'ಗೆ ಒಳಪಡಿಸಲಿಚ್ಛಿಸುವ ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತದಿಂದ ಅರ್ಜಿ ಆಹ್ವಾನಿಸಲಾಗಿದೆ.
ವಾರ್ತಾ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಪೂರ್ಣ ವೃತ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ಯೋಜನೆ ಅನ್ವಯವಾಗಲಿದೆ. ಯೋಜನೆಯಡಿ ಗಂಭೀರ ಹಾಗೂ ಆಘಾತಕಾರಿಯಾದ ಏಳು ನಿರ್ದಿಷ್ಟ ಕಾಯಿಲೆಗಳಿಗೆ ರಾಜ್ಯದಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತಿದೆ.

ಯೋಜನೆಗೆ ಒಳಪಡಿಸಲು ಇಚ್ಛಿಸುವ ಪತ್ರಕರ್ತರು ವಾರ್ತಾ ಇಲಾಖೆ ಅಧಿಕೃತ ಜಾಲಾತಾಣ www.karnatakavarthe.org ನಲ್ಲಿ ಅರ್ಜಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಆಯಾ ವಾರ್ತಾಧಿಕಾರಿಗಳಿಗೆ ಸಲ್ಲಿಬಹುದು.












Click it and Unblock the Notifications