ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆ ಶಿವಕುಮಾರ್ ನಿವಾಸಕ್ಕೆ ರಾಜು ಕಾಗೆ, ಅಶೋಕ್ ಪೂಜಾರಿ ಭೇಟಿ

|
Google Oneindia Kannada News

ಬೆಂಗಳೂರು, ನವೆಂಬರ್ 10: ಡಿಕೆ ಶಿವಕುಮಾರ್ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಇನ್ನೇನು ಉಪ ಚುನಾವಣೆ ಹತ್ತಿರ ಬಂದಿದೆ. ರಾಜಕೀಯದಲ್ಲಿ ಹಲವು ಬದಲಾವಣೆಗಳೂ ಕೂಡ ಗೋಚರಿಸುತ್ತುವೆ. ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ಮನೆಗೆ ದೌಡಾಯಿಸಿದ್ದಾರೆ.

ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ನೆಮ್ಮದಿ ನೀಡಿದ ಹೈಕೋರ್ಟ್ ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ನೆಮ್ಮದಿ ನೀಡಿದ ಹೈಕೋರ್ಟ್

ಕಾಗವಾಡ ಕ್ಷೇತ್ರದ ಮಾಜಿ ಶಾಸಕ ಮತ್ತು ಬಿಜೆಪಿ ಪರಾಜಿತ ಅಭ್ಯರ್ಥಿ ರಾಜು ಕಾಗೆ ಹಾಗೂ ಅಶೋಕ್ ಪೂಜಾರಿ ಡಿಕೆಶಿಯವರನ್ನು ಭೇಟಿಯಾಗಿದ್ದಾರೆ.

Raju Kage And Ashok Poojary visit DK Sivakumars residence

ಕಾಗವಾಡದಿಂದ ರಾಜು ಕಾಗೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು. ಗೋಕಾಕ್ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಅಶೋಕ್ ಪೂಜಾರಿಯವರನ್ನು ರಮೇಶ್ ಜಾರಕಿಹೊಳಿ ವಿರುದ್ಧ ಗೋಕಾಕ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಾರೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ.

ಅನರ್ಹ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಈ ಪೈಕಿ ರಾಜು ಕಾಗೆ ಹಾಗೂ ಅಶೋಕ್‌ ಪೂಜಾರಿಗೆ ಬಿಜೆಪಿ ಟಿಕೆಟ್‌ ನೀಡುವುದು ಅನುಮಾನವಾಗಿದೆ. ಈ ಹಿನ್ನೆಲೆ ಇಬ್ಬರು ನಾಯಕರು ಡಿಕೆಶಿಯನ್ನು ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ವಾಪಸ್ ತೆರಳಿದ್ದಾರೆ.

English summary
By elections are near Raju Kage And Ashok Poojary visit Former minister DK Sivakumars residence Today(November ) In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X