ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾವಿರ ಕೋಟಿ ರೂ. ಕಾರಿಡಾರ್‌ಗೆ 3 ವರ್ಷದ ಆಯಸ್ಸೇ?

|
Google Oneindia Kannada News

ಬೆಂಗಳೂರು, ಮೇ 27: ಒಂದು ಸಾವಿರ ಕೋಟಿ ರೂ. ಎಲಿವೇಟೆಡ್ ಕಾರಿಡಾರ್ ಯೋಜನೆಯ ಆಯಸ್ಸು ಕೇವಲ ಮೂರು ವರ್ಷದ ಆಯಸ್ಸೇ? ಇಂತಹ ಹಗಲು ದರೋಡೆ ನಿಲ್ಲಿಸಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ಆಗ್ರಹಿಸಿದ್ದಾರೆ.

'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ 'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ

ಹೆಬ್ಬಾಳ ವೃತ್ತದವರೆಗಿನ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 1 ಸಾವಿರ ಕೋಟಿ ರೂ. ವ್ಯಯಿಸಲಾಗುತ್ತಿದೆ. ಆದರೆ ಯೋಜನೆ ಟೆಂಡರ್‌ ಪಡೆದ ಕಂಪನಿಯು ಕೇವಲ ಮೂರು ವರ್ಷದವರೆಗೆ ನಿರ್ವಹಣಾ ಹಾಗೂ ದುರಸ್ತಿ ಕಾರ್ಯದ ಜವಾಬ್ದಾರಿಯಿದೆ.

ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ

ಮೂರು ವರ್ಷದ ಬಳಿಕ ನಿರ್ವಹಣಾ ವೆಚ್ಚಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಖಜಾನೆಯಿಂದ ಹಣ ನೀಡಬೇಕಿದೆ. ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಮನಹರಿಸಬೇಕು. ಯೋಜನೆ ಬಗ್ಗೆ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನವನ್ನು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಕೈ ಬಿಡಬೇಕು ಎಂದು ರಾಜೀವ್‌ ಆಗ್ರಹಿಸಿದ್ದಾರೆ.

ಯೋಜನೆ ಏನು?: ಚಾಲುಕ್ಯ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ ವರೆಗೆ ಸ್ಟೀಲ್ ಫ್ಲೈಓವರ್ ನಿರ್ಮಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿತ್ತು. 1800 ಕೋಟಿ ರೂ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಯೋಜನೆಯು ಹಣವನ್ನು ಕಿಕ್ ಬ್ಯಾಕ್ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ಗೆ ನೀಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಹಿಂದಿನ ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿತ್ತು.

vaRajyasabha member Rajeev opposes elevated corridor projectaRajyasabha member Rajeev opposes elevated corridor project

ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವು ಅಸ್ತಿತ್ವಕ್ಕೆ ಬಂದಾಗ ಪರಮೇಶ್ವರ್ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಆಗಲೂ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಟೀಲ್ ಫ್ಲೈಓವರ್ ಬದಲು ಎಲಿವೇಟೆಡ್ ಕಾರಿಡಾರ್ ಯೋಜನೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಮಿಸಲು ಆಲೋಚಿಸಿತ್ತು.

English summary
BJP Rajyasabha member Rajeev chandrasekhar raise the concern over elevated corridor project maintainance and project amount
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X