ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯೋತ್ಸವ ಪ್ರಶಸ್ತಿ ಯಾರ್ಯಾರ ಮುಡಿಗೆ: ಇಂದು ಹೊರಬೀಳಲಿದೆ ಪಟ್ಟಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಬುಧವಾರ ನಡೆಯಲಿದೆ. ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಪ್ರಶಸ್ತಿ ಬಯಸಿಬಂದಿರುವ 2 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸುವ ಕಾರ್ಯ ತ್ವರಿತವಾಗಿ ನಡೆದಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈ ಹೊಣೆ ವಹಿಸಲಾಗಿದ್ದರೂ ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ರಾಜ್ಯೋತ್ಸವ ಕೇವಲ ಒಂದು ದಿನವಷ್ಟೇ ಬಾಕಿ ಇದೆ ಆದರೂ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದೆ.

ನ.1ರ ರಾಜ್ಯೋತ್ಸವ ಸಾಂಸ್ಕೃತಿಕ ಮೆರವಣಿಗೆಗೆ ಸಜ್ಜಾಗಿದೆ ಮಲ್ಲೇಶ್ವರ ನ.1ರ ರಾಜ್ಯೋತ್ಸವ ಸಾಂಸ್ಕೃತಿಕ ಮೆರವಣಿಗೆಗೆ ಸಜ್ಜಾಗಿದೆ ಮಲ್ಲೇಶ್ವರ

ಕಳೆದ ಸರ್ಕಾರದ ಅವಧಿಯಲ್ಲಿ ಆಯ್ಕೆಗಾಗಿ ಸಾಹಿತಿಗಳ ನೆರವು ಪಡೆಯಲಾಗುತ್ತಿತ್ತು, ಸಾಹಿತಿಗಳ ನೇತೃತ್ವದ ಸಮಿತಿ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿತ್ತು.

Rajyotsava award list will finalize today

ಬೆಳಗಾವಿಯೇ 2ನೇ ರಾಜಧಾನಿಯಾಗಲಿ, ಅದಕ್ಕೂ ಮುನ್ನ ಮುಖ್ಯಮಂತ್ರಿಗಳೇ.. ಬೆಳಗಾವಿಯೇ 2ನೇ ರಾಜಧಾನಿಯಾಗಲಿ, ಅದಕ್ಕೂ ಮುನ್ನ ಮುಖ್ಯಮಂತ್ರಿಗಳೇ..

ಆದರೆ ಈ ವರ್ಷ ಇದ್ಯಾವ ಪ್ರಕ್ರಿಯೆಯೂ ನಡೆಯದೆ ನೇರವಾಗಿ ಕೇವಲ ಕನ್ನಡ ರಾಜ್ಯೋತ್ಸವ ಒಂದು ದಿನ ಬಾಕಿ ಇರುವಾಗ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದೆ. ಜತೆಗೆ ಉಪ ಚುನಾವಣೆಯ ಪ್ರಚಾರದಲ್ಲಿ ಸರ್ಕಾರ ಮುಳುಗಿದ್ದರಿಂದಲೂ ಇದು ವಿಳಂಬವಾಗಿದೆ ಎನ್ನಲಾಗುತ್ತಿದೆ. ಸಭೆ ಇಂದು ನಡೆಯಲಿದ್ದು ಯಾರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

English summary
Committee headed by chief minister H.D.Kumaraswamy will be finalized Rajyotsava award winners on October 31. There were more than 2,000 applications before the committee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X